Saturday, April 19, 2025
Google search engine

Homeರಾಜ್ಯಸುದ್ದಿಜಾಲಕರವೇ ಅಧ್ಯಕ್ಷ ನಾರಾಯಣಗೌಡ ಮತ್ತೆ ಜೈಲು ಪಾಲು

ಕರವೇ ಅಧ್ಯಕ್ಷ ನಾರಾಯಣಗೌಡ ಮತ್ತೆ ಜೈಲು ಪಾಲು

ಬೆಂಗಳೂರು: 2017 ರಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಉಂಟು ಮಾಡಿದ ಪ್ರಕರಣ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ ನಾರಾಯಣಗೌಡ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ಆದೇಶವನ್ನ ಬೆಂಗಳೂರಿನ 30ನೇ ಎಸಿಎಂಎಂ ಕೋರ್ಟ್‌ ನಾಳೆಗೆ ಕಾಯ್ದಿರಿಸಿದೆ.
ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಕರವೇ ಅಧ್ಯಕ್ಷ ನಾರಾಯಣಗೌಡ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ 30ನೇ ಎಸಿಎಂಎಂ ಕೋರ್ಟ್‌ ನಾಳೆಗೆ ಮುಂದೂಡಿದೆ. ಈ ಹಿನ್ನೆಲೆಯಲ್ಲಿ ನಾರಾಯಣಗೌಡ ಅವರನ್ನು ಪೊಲೀಸರು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದಿದ್ದಾರೆ.
ವಾಣಿಜ್ಯ ಮಳಿಗೆ ಅಂಗಡಿಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಬಂಧಿತರಾಗಿದ್ದ ನಾರಾಯಣಗೌಡರಿಗೆ ಎರಡು ದಿನಗಳ ಹಿಂದೆ ಜಾಮೀನು ಸಿಕ್ಕಿತ್ತು. ಜೈಲಿನಿಂದ ಹೊರಬಂದ ಬಳಿಕ 2017 ರಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಉಂಟು ಮಾಡಿದ ಪ್ರಕರಣ ಸಂಬಂಧ ಮತ್ತೆ ಪೊಲೀಸರು ನಾರಾಯಣಗೌಡರನ್ನ ವಶಕ್ಕೆ ಪಡೆದಿದ್ದರು.

RELATED ARTICLES
- Advertisment -
Google search engine

Most Popular