ಬೆಂಗಳೂರು: ಇಂದಿನಿಂದ ಬೆಂಗಳೂರಿನ ದೇವಾಲಯಗಳಲ್ಲಿ ಅಧಿಕೃತವಾಗಿ ವಸ್ತ್ರಸಂಹಿತೆ ಜಾರಿಯಾಗಲಿದ್ದು, ಈ ಕುರಿತು ಕರ್ನಾಟಕ ದೇವಸ್ಥಾನ-ಮಠ, ಧಾರ್ಮಿಕ ಸಂಸ್ಥೆಗಳ ಮಹಾಸಂಘ ಇಂದಿನಿಂದ ಅಭಿಯಾನ ನಡೆಸಲಿದೆ.
ಇಂದು ಮಧ್ಯಾಹ್ನ 12 ಗಂಟೆಗೆ ವಸಂತನಗರದ ಶ್ರೀಲಕ್ಷ್ಮಿ ವೆಂಕಟರಮಣ ದೇವಾಲಯದಲ್ಲಿ ವಸ್ತ್ರ ಸಂಹಿತೆ ಬೋರ್ಡ್ ಹಾಕುವ ಅಭಿಯಾನಕ್ಕೆ ಚಾಲನೆ ದೊರೆಯಲಿದೆ.
ಭಾರತೀಯ ಉಡುಪು ಧರಿಸಿ ಬರುವವರಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಅರೆಬರೆ ಬಟ್ಟೆ ಧರಿಸಿ ಬರುವವರಿಗೆ ದರ್ಶನಕ್ಕೆ ಅವಕಾಶ ನೀಡುವುದಿಲ್ಲವೆಂದು ಕರ್ನಾಟಕ ದೇವಸ್ಥಾನ ಮಹಾಸಂಘ ದೇಗುಲಗಳ ಮುಂದೆ ಬೋರ್ಡ್ ಹಾಕಲಾಗುತ್ತದೆ.
ದೇವಾಲಯದ ಒಳಗೆ ವಸ್ತ್ರಸಂಹಿತೆ ಪಾಲಿಸುವಂತೆ, ವಿದೇಶಿ ವಸ್ತ್ರಗಳು ಹಾಗೂ ತುಂಡುಡುಗೆ ಧರಿಸಿದವರಿಗೆ ದೇವಾಲಯದ ಒಳಗೆ ಪ್ರವೇಶಕ್ಕೆ ಅವಕಾಶ ನೀಡದಂತೆ ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ ಈ ಹಿಂದೆ ಒತ್ತಾಯಿಸಿತ್ತು.
ಈ ಸಂಬಂಧ ಕಳೆದ ತಿಂಗಳು ರಾಜ್ಯದ ಎಲ್ಲ ದೇವಾಲಯ ಮತ್ತು ಮಠಗಳ ಅರ್ಚಕರು ಮತ್ತು ಟ್ರಸ್ಟಿಗಳು ನಡೆಸಿದ್ದರು. ಸಭೆಯಲ್ಲಿ ರಾಜ್ಯದ ಎಲ್ಲ ಅರ್ಚಕರು ಹಾಗೂ ಟ್ರಸ್ಟಿಗಳು ಜನವರಿಯಿಂದ ಈ ನಿಯಮವನ್ನು ಜಾರಿ ಮಾಡಬೇಕೆಂದು ತೀರ್ಮಾನಿಸಿದ್ದರು. ಹೀಗಾಗಿ ಇಂದಿನಿಂದ ಬೆಂಗಳೂರಿನ ರಾಜ್ಯದ ಎಲ್ಲ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಯಾಗಿದೆ.
ಯಾವ ವಸ್ತ್ರಕ್ಕೆ ನಿಷೇಧ
ಈ ವಸ್ತ್ರಸಂಹಿತೆ ಪ್ರಕಾರ ಪುರುಷರು ದೇವಲಾಯಕ್ಕೆ ಚಡ್ಡಿ, ಬರ್ಮುಡಾ, ಹರಿದ ಜೀನ್ಸ್, ಎದೆ ಕಾಣುವ ಟಿಶರ್ಟ್ ಧರಿಸಿಕೊಂಡು ಬರುವಂತಿಲ್ಲ. ಮಹಿಳೆಯರು ಸ್ಕರ್ಟ್, ಮಿಡಿ, ಹರಿದ ಜೀನ್ಸ್, ಶಾರ್ಟ್ಸ್ ಹಾಕಿಕೊಂಡು ಬರುವಂತಿಲ್ಲ. ಒಂದು ವೇಳೆ ಬಂದರೇ ದೇವಸ್ಥಾನದ ಒಳಗೆ ಪ್ರವೇಶ ನಿರ್ಬಂಧಿಸಲಾಗಿದೆ.
ದಕ್ಷಿಣ ಕನ್ನಡ-ಉಡುಪಿಯ ಕೆಲವು ದೇವಾಲಯಗಳಲ್ಲಿ ಪುರುಷರು ಅಂಗಿ ಧರಿಸಿ ದೇವಾಲಯದ ಒಳಗ ಹೋಗುವಂತಿಲ್ಲ.