Sunday, April 20, 2025
Google search engine

Homeರಾಜ್ಯರಾಜ್ಯದಲ್ಲಿ ೧೬ ಸಾವಿರ ವೈದ್ಯಕೀಯ ವೃತ್ತಿಪರರ ಕೊರತೆ: ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ರಾಜ್ಯದಲ್ಲಿ ೧೬ ಸಾವಿರ ವೈದ್ಯಕೀಯ ವೃತ್ತಿಪರರ ಕೊರತೆ: ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ರಾಜ್ಯದಲ್ಲಿ ೧೬ಸಾವಿರಕ್ಕೂ ಹೆಚ್ಚು ವೈದ್ಯಕೀಯ ವೃತ್ತಿಪರರ ಕೊರತೆ ಇದೆ ಎಂದು ವರದಿಯಾಗಿದ್ದು, ಈ ಸಂಬಂಧ ಕರ್ನಾಟಕ ಹೈಕೋರ್ಟ್ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.
ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ(ಎಫ್‌ಐಸಿಸಿಐ) ನಡೆಸಿದ ಅಧ್ಯಯನದ ಆಧಾರದ ಮೇಲೆ ಮಾಧ್ಯಮಗಳು ಪ್ರಕಟಿಸಿದ್ದ ವರದಿಯನ್ನು ಆಧರಿಸಿ ದಾಖಲಿಸಿಕೊಂಡಿದ್ದ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠ, ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದೆ.

ಆರೋಗ್ಯ ಇಲಾಖೆಯ ಎಲ್ಲಾ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಮತ್ತು ಆರೋಗ್ಯ ರಕ್ಷಣೆ ಮತ್ತು ಆರೋಗ್ಯ ಮೂಲಸೌಕರ್ಯಗಳ ಮೇಲಿನ ಬಜೆಟ್ ಹಂಚಿಕೆಯನ್ನು ಅನುಷ್ಠಾನಗೊಳಿಸುವ ಕಾರ್ಯತಂತ್ರಗಳ ಕುರಿತು ವರದಿ ಸಲ್ಲಿಸಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಪಿಐಎಲ್ ಕೋರಿದೆ. “ಕರ್ನಾಟಕದಲ್ಲಿ ಆರೋಗ್ಯ ಸೇವೆಗಳು ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ತೀವ್ರ ಸಂಕಷ್ಟದಲ್ಲಿದ್ದು, ಸಾಂಕ್ರಾಮಿಕ ರೋಗಗಳ ಆತಂಕಕಾರಿ ಏರಿಕೆಯೊಂದಿಗೆ, ಕಡಿಮೆ ಸಿಬ್ಬಂದಿ ಮತ್ತು ರೋಗಿಗಳ ಹೆಚ್ಚಳವನ್ನು ನಿಭಾಯಿಸಲು ಆರೋಗ್ಯ ಇಲಾಖೆ ಅಸಮರ್ಥವಾಗಿದೆ” ಎಂದು ಪಿಐಎಲ್ ಹೇಳಿದೆ.

ಎಫ್‌ಐಸಿಸಿಐ ಕಳೆದ ವರ್ಷ ಅಕ್ಟೋಬರ್ ೧೧ ರಂದು ಕರ್ನಾಟಕದ ವಿಷನ್ ೧ ಅಡಿ ಟ್ರಿಲಿಯನ್ ಆರ್ಥಿಕತೆ ವರದಿ ಬಿಡುಗಡೆ ಮಾಡಿತ್ತು. ಈ ವರದಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ೪೫೪ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕೊರತೆ ಇದೆ ಎಂದು ಹೇಳಲಾಗಿದೆ. ಈ ವರದಿಯಲ್ಲಿ ದೊಡ್ಡ ಮಟ್ಟದ ಸಾರ್ವಜನಿಕ ಹಿತಾಸಕ್ತಿ ಅಡಗಿದೆ. ಹೀಗಾಗಿ ಪಿಐಎಲ್ ದಾಖಲಿಸಿಕೊಂಡು ನ್ಯಾಯಾಲಯದ ಮುಂದೆ ಪಟ್ಟಿ ಮಾಡುವಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್‌ಗೆ ನಿರ್ದೇಶನ ನೀಡಿತ್ತು.

ರಾಜ್ಯದಲ್ಲಿ ೭೨೩ ಎಂಬಿಬಿಎಸ್ ವೈದ್ಯರು, ೭,೪೯೨ ದಾದಿಯರು, ೧,೫೧೭ ಲ್ಯಾಬ್ ತಂತ್ರಜ್ಞರು, ೧,೫೧೨ ಫಾರ್ಮಸಿಸ್ಟ್‌ಗಳು, ೧,೭೫೨ ಅಟೆಂಡೆಂಟ್‌ಗಳು ಮತ್ತು ೩,೨೫೩ ಗ್ರೂಪ್ ಡಿ ಸಿಬ್ಬಂದಿ ಕೊರತೆ ಇದೆ ಎಂದು ವರದಿ ಉಲ್ಲೇಖಿಸಿದೆ.

RELATED ARTICLES
- Advertisment -
Google search engine

Most Popular