Monday, April 21, 2025
Google search engine

Homeಅಪರಾಧಪಡಿತರ ಅಕ್ಕಿ ಅಕ್ರಮ ಸಾಗಾಟ : ೪.೧೭ ಲಕ್ಷ ಮೌಲ್ಯದ ಅಕ್ಕಿ ವಶ , ಚಾಲಕನ...

ಪಡಿತರ ಅಕ್ಕಿ ಅಕ್ರಮ ಸಾಗಾಟ : ೪.೧೭ ಲಕ್ಷ ಮೌಲ್ಯದ ಅಕ್ಕಿ ವಶ , ಚಾಲಕನ ಬಂಧನ

ಮೈಸೂರು : ಸಿಸಿಬಿ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ರೂ.೪.೧೭ ಲಕ್ಷ ಮೌಲ್ಯದ ೨೪೧ ಮೂಟೆ ಪಡಿತರ ಅಕ್ಕಿ ಹಾಗೂ ಅಕ್ಕಿ ಸಾಗಣೆ ಮಾಡುತ್ತಿದ್ದ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿ ಆಧರಿಸಿ ಹೆಬ್ಬಾಳ್‌ನಲ್ಲಿರುವ ಕೆಎಫ್‌ಸಿಐ ಗೋದಾಮಿನಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಪಡಿತರ ಅಕ್ಕಿ ಸಿದ್ದಲಿಂಗಪುರ ಗ್ರಾಮದ ಬಳಿ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದೆ.

ಕೆಎ-೦೯-ಡಿ ೯೬೮೬ ನೊಂದಣಿ ಸಂಖ್ಯೆಯ ಲಾರಿಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಣೆ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಲಾರಿ ಮತ್ತು ಅಕ್ಕಿಯನ್ನು ವಶಪಡಿಸಿಕೊಂಡು ಚಾಲಕನನ್ನು ಬಂಧಿಸಿ ಮೇಟಗಳ್ಳಿ ಪೊಲೀಸರ ವಶಕ್ಕೆ ನೀಡಲಾಗಿದೆ. ಸ್ಥಳಕ್ಕೆ ಆಹಾರ ನಿರೀಕ್ಷಕರಾದ ಕಿರಣ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇಟಗಳ್ಳಿ ಠಾಣೆ ಇನ್ಸ್ ಪೆಕ್ಟರ್ ದಿವಾಕರ್ ಹಾಗೂ ಸಬ್ ಇನ್ಸ್ ಪೆಕ್ಟರ್ ಶಬರೀಶ್ ರವರು ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್, ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್, ಅಪರಾಧ ಮತ್ತು ಸಂಚಾರ ಡಿಸಿಪಿ ಜಾಹ್ನವಿ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಎಸಿಪಿ ಸಂದೇಶ್ ಕುಮಾರ್ ಉಸ್ತುವಾರಿಯಲ್ಲಿ ಸಿಸಿಬಿ ಇನ್ಸ್ ಪೆಕ್ಟರ್ ಪೂವಯ್ಯ, ಪಿ.ಎಸ್.ಐ ಲೇಪಾಕ್ಷ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular