ದಕ್ಷಿಣ ಕನ್ನಡ(ಮಂಗಳೂರು): ವಿಧಾನಸಭೆ ಚುನಾವಣೆಯಲ್ಲಿ ಗೆದ್ರೆ ಗಣಪತಿ ದೇವರಿಗೆ ಗಂಟೆ ನೀಡುವುದಾಗಿ ಹರಕೆ ಹೊತ್ತಿದ್ದ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಕೊನೆಗೂ ತಮ್ಮ ಹರಕೆ ಸಲ್ಲಿಸಿದ್ದಾರೆ.
ಶಾಸಕಿ ನಯನಾ ಮೋಟಮ್ಮ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿರುವ ಪ್ರಸಿದ್ಧ ಸೌತಡ್ಕ ಕ್ಷೇತ್ರಕ್ಕೆ ಬಂದು ಹರಕೆ ತೀರಿಸಿದ್ದಾರೆ. ಇದೇ ವೇಳೆ ಇವರ ಜೊತೆಗೆ ಮೂಡಿಗೆರೆ ಕಾಂಗ್ರೆಸ್ ಮುಖಂಡರು ಕೂಡಾ ಇದ್ದರು.