Saturday, April 19, 2025
Google search engine

Homeಕ್ರೀಡೆಕ್ರೀಡೆಗಳಲ್ಲಿ ಸೋಲು ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯ-ಮೋಹನ್ ಕುಮಾರ್

ಕ್ರೀಡೆಗಳಲ್ಲಿ ಸೋಲು ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯ-ಮೋಹನ್ ಕುಮಾರ್

ಪಿರಿಯಾಪಟ್ಟಣ: ಕ್ರೀಡೆಗಳಲ್ಲಿ ಸೋಲು ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯ ಎಂದು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮೋಹನ್ ಕುಮಾರ್ ತಿಳಿಸಿದರು.

ತಾಲ್ಲೂಕು ಸರ್ಕಾರಿ ನೌಕರರ ಸಂಘ ವತಿಯಿಂದ ಸರ್ಕಾರಿ ನೌಕರರಿಗಾಗಿ ಮೊದಲ ಬಾರಿಗೆ ಆಯೋಜಿಸಿದ್ದ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.ಸರ್ಕಾರಿ ನೌಕರಿ ಎಂದರೆ ಸದಾ ಒತ್ತಡದಿಂದ ಕೆಲಸ ನಿರ್ವಹಿಸಬೇಕಾಗುತ್ತದೆ ಸದಾ ಒಂದಲ್ಲ ಒಂದು ರೀತಿ ಕೆಲಸ ಕಾರ್ಯಗಳಲ್ಲಿ ತೊಡಗಿಕೊಳ್ಳುವ ಸರ್ಕಾರಿ ನೌಕರರೆಲ್ಲ ಒಟ್ಟಾಗಿ ಸೇರಬೇಕೆಂಬ ಉದ್ದೇಶದಿಂದ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದ್ದು ಇದಕ್ಕೆ ಸಹಕರಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ಹೇಳಿದರು.

ಸಂಘದ ಜಿಲ್ಲಾಧ್ಯಕ್ಷ ಗೋವಿಂದರಾಜು ಅವರು ಮಾತನಾಡಿ ಸರ್ಕಾರಿ ನೌಕರರು ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಂಡಾಗ ಜನಮನ್ನಣೆ ಗಳಿಸಬಹುದು, ಸದಾ ಸಾರ್ವಜನಿಕ ಕೆಲಸದಲ್ಲಿ ನಿರತ ಸರ್ಕಾರಿ ನೌಕರರೆಲ್ಲರನ್ನು ಒಟ್ಟಾಗಿ ಸೇರಿಸಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿರುವುದಕ್ಕೆ ಶ್ಲಾಘ ವ್ಯಕ್ತಪಡಿಸಿದರು.

ಕ್ರಿಕೆಟ್ ಪಂದ್ಯಾವಳಿಯಲ್ಲಿ ಕಂದಾಯ ಶಿಕ್ಷಣ ಆರೋಗ್ಯ ನ್ಯಾಯಾಂಗ ಇಲಾಖೆಯ ನೌಕರರು ಭಾಗವಹಿಸಿದ್ದರು, ತಹಶೀಲ್ದಾರ್ ಕುಂ ಇ ಅಹಮದ್ ಅವರು ಕ್ರಿಕೆಟ್ ಪಂದ್ಯಾವಳಿಯಲ್ಲಿ ಹುಮ್ಮಸ್ಸಿನಿಂದ ಪಾಲ್ಗೊಳ್ಳುವ ಮೂಲಕ ಕಂದಾಯ ಇಲಾಖೆ ಪ್ರಥಮ ಸ್ಥಾನ ಪಡೆಯಲು ಕಾರಣರಾದರು, ಶಿಕ್ಷಣ ಇಲಾಖೆ ನೌಕರರು ದ್ವಿತೀಯ ಸ್ಥಾನ ಪಡೆದರು, ಸರಣಿ ಪುರುಷೋತ್ತಮ ಪ್ರಶಸ್ತಿ ಕಂದಾಯ ಇಲಾಖೆಯ ರಘುವೀರ್ ಪಾಲಾಯಿತು, ಈ ವೇಳೆ ಸರ್ಕಾರಿ ನೌಕರರ ಕ್ರಿಕೆಟ್ ಪಂದ್ಯಾವಳಿಯಲ್ಲಿ ರಾಷ್ಟ್ರ ಪ್ರತಿನಿಧಿಸುತ್ತಿರುವ ತಾಲ್ಲೂಕಿನ ಸರ್ವೆ ಇಲಾಖೆಯ ಹರ್ಷಿತ್ ಕುಮಾರ್ ರನ್ನು ಗೌರವಿಸಲಾಯಿತು.

ಈ ಸಂದರ್ಭ ಸರ್ಕಾರಿ ನೌಕರರ ಜಿಲ್ಲಾ ಸಂಘದ ಆನಂದ್, ಗಿರೀಶ್, ರೇವಣ್ಣ, ಸರ್ಕಾರಿ ನೌಕರರ ಸಂಘದ ಖಜಾಂಚಿ ಅಣ್ಣೇಗೌಡ, ಗೌರವಾಧ್ಯಕ್ಷ ಪ್ರಕಾಶ್, ಉಪಾಧ್ಯಕ್ಷರಾದ ಉಷಾ, ಅಶೋಕ್, ಮಾಜಿ ಅಧ್ಯಕ್ಷರಾದ ಈ.ಬಿ ವೆಂಕಟೇಶ್, ಸಂಘದ ಪದಾಧಿಕಾರಿಗಳು ಹಾಗೂ ನೌಕರರು ಇದ್ದರು.

RELATED ARTICLES
- Advertisment -
Google search engine

Most Popular