Sunday, April 20, 2025
Google search engine

Homeಸ್ಥಳೀಯದೆಹಲಿಯಲ್ಲಿ ಫೆಬ್ರವರಿ 13ರಂದು ದೇಶದ ರೈತರ ಮಹಾಸಂಗಮ ರ್‍ಯಾಲಿ

ದೆಹಲಿಯಲ್ಲಿ ಫೆಬ್ರವರಿ 13ರಂದು ದೇಶದ ರೈತರ ಮಹಾಸಂಗಮ ರ್‍ಯಾಲಿ

ಮೈಸೂರು: ಒಂದು ವರ್ಷ ಕಾಲ ಹೋರಾಟ ಮಾಡಿದ ರೈತರಿಗೆ ಪ್ರಧಾನಿಯವರು ಭರವಸೆ ನೀಡಿ ಹುಸಿಗೊಳಿಸಿದ್ದಾರೆ. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಶಾಸನ ಜಾರಿಗಾಗಿ ಕೃಷಿ ಉತ್ಪನ್ನಗಳಿಗೆ ಎಂ ಎಸ್ ಸ್ವಾಮಿನಾಥನ್ ಆಯೋಗದ ವರದಿಯಂತೆ ಬೆಂಬಲ ಬೆಲೆ ನಿಗದಿ ಮಾಡಲು ದೇಶದ ರೈತರ ಸಂಪೂರ್ಣ ಕೃಷಿ ಸಾಲ ಮನ್ನಾಕಾಗಿ ಒತ್ತಾಯಿಸಲು ದೆಹಲಿಯಲ್ಲಿ ಫೆಬ್ರವರಿ 13ರಂದು ದೇಶದ ಎಲ್ಲಾ ರೈತ ಸಂಘಟನೆಗಳ ಮಹಾಸಂಗಮ ರ್ಯಾಲಿ ನಡೆಯಲಿದೆ.

ದಕ್ಷಿಣ ಭಾರತ ಸಂಯುಕ್ತ ಕಿಸಾನ್ ಮೋರ್ಚ ಸಂಚಾಲಕ ,ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಈ ಕುರಿತು ಮಾತನಾಡಿ, ಈಗಾಗಲೇ ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ದೇಶದ ವಿವಿಧ ರಾಜ್ಯಗಳಲ್ಲಿ 14 ಕಿಸಾನ್ ಮಹಾ ಪಂಚಾಯತ್  ಸಮಾವೇಶಗಳ ನಡೆಸಿ ರೈತರ ಜಾಗೃತಿ ಪಡಿಸಲಾಗಿದೆ ಎಂದು ತಿಳಿಸಿದರು.

ದೇಶದ ರೈತರನ್ನು ರಕ್ಷಣೆ ಮಾಡಲು ಕೇಂದ್ರ ಸರ್ಕಾರ ವಿಶ್ವ ವ್ಯಾಪಾರ ಒಪ್ಪಂದದಿಂದ ಹೊರಗೆ ಬರಬೇಕು. ಕಬ್ಬಿನ ಎಫ್ ಆರ್ ಪಿ ದರವನ್ನು ಕನಿಷ್ಠ 4000 ರೂಗಳಿಗೆ ಏರಿಕೆ ಮಾಡಬೇಕು . 60 ವರ್ಷ ತುಂಬಿದ ರೈತರಿಗೆ ಕನಿಷ್ಠ 10,000 ಪಿಂಚಣಿ ನೀಡುವ ಯೋಜನೆ ಜಾರಿಗೆ ತರಬೇಕು. ಬೆಳೆ ವಿಮೆ ಪದ್ಧತಿ ಬದಲಾಯಿಸಬೇಕು ಎಲ್ಲಾ ಬೆಳೆಗಳಿಗೂ ಬೆಳೆವಿಮೆ ಜಾರಿ ಆಗಬೇಕು ಎಂಬ ಒತ್ತಾಯಗಳನ್ನು ಮಾಡಲಾಗುವುದು ಎಂದರು.

ಬಣ್ಣಾರಿ ಸಕ್ಕರೆ ಕಾರ್ಖಾನೆಯನ್ನು ರಾಜ್ಯ ಸರ್ಕಾರ ವಶಕ್ಕೆ ಪಡೆಯಬೇಕು. ಮುಖ್ಯಮಂತ್ರಿಯವರ ಕ್ಷೇತ್ರದಲ್ಲಿರುವ ಬಣ್ಣಾರಿ ಸಕ್ಕರೆ ಕಾರ್ಖಾನೆ ರಹದಾ ರಿ ನಿಯಮಗಳನ್ನು ಉಲ್ಲಂಘಿಸಿ ಸರ್ಕಾರಕ್ಕೆ ಹಾಗೂ ರೈತರಿಗೆ ಹಲವಾರು ವಿಧದಲ್ಲಿ ಸುಳ್ಳು ಮಾಹಿತಿ ವರದಿ ಸಲ್ಲಿಸಿ ವಂಚನೆ ಮಾಡುತ್ತಿದೆ. ರಾಜ್ಯ ಸರ್ಕಾರ ಕೂಡಲೇ ಈ ಬಗ್ಗೆ ಕೂಡಲೇ ದಕ್ಷ ಅಧಿಕಾರಿಗಳ ತಂಡ ರಚಿಸಿ ತನಿಖೆ ನಡೆಸಿ ಸಕ್ಕರೆ ಕಾರ್ಖಾನೆಯನ್ನು ಸರ್ಕಾರದ ವಶಕ್ಕೆ ಪಡೆದು ರೈತರಿಗೆ ನ್ಯಾಯ ಕೊಡಿಸಬೇಕು ಎಂದು ಒತ್ತಾಯಿಸಿದರು.

ಸಹಕಾರಿ ವ್ಯವಸ್ಥೆಯಲ್ಲಿರುವ ಎಪಿಎಂಸಿ, ಸಹಕಾರಿ ಬ್ಯಾಂಕುಗಳು, ಹಾಲು ಉತ್ಪಾದಕರ ಸಂಸ್ಥೆಗಳ ಕಾರ್ಯನಿರ್ವಾಹಣೆಯಲ್ಲಿ ಸರ್ಕಾರದ ನಾಮನಿರ್ದೇಶನ ಪ್ರತಿನಿಧಿ ಗಳನ್ನು ನೇಮಕ ಮಾಡುವುದನ್ನು ಕೈ ಬಿಡಬೇಕು ಸಂಸ್ಥೆಗಳು ದುರ್ಬಲವಾಗಲು ರಾಜಕೀಯ ಪ್ರವೇಶ ಕಾರಣವಾಗಿದೆ ಎಂಬುದನ್ನು ಸರ್ಕಾರ ಅರಿತುಕೊಳ್ಳಬೇಕು ಎಂದರು.

ಕರ್ನಾಟಕ ಜಲ ಸಂರಕ್ಷಣಾ ಸಮಿತಿ ವತಿಯಿಂದ, ಇಂದಿನ ಮಾಧ್ಯಮ ಹಾಗೂ ಪ್ರಜಾತಂತ್ರ ವ್ಯವಸ್ಥೆ, ಕುರಿತು ವಿಚಾರ ವಿಮರ್ಶ ಗೋಷ್ಠಿ ಇದೇ ತಿಂಗಳ 24 ರಂದು ಬೆಂಗಳೂರಿನ ಶಾಸಕರ ಭವನದ ಸಭಾಂಗಣದಲ್ಲಿ ನಡೆಯಲಿದೆ ನಿವೃತ್ತ ನ್ಯಾಯಾಧೀಶರು, ಸಮಾಜ  ಚಿಂತಕರು, ಮಾಧ್ಯಮ ಕ್ಷೇತ್ರದ ಚಿಂತಕರು ಗೋಷ್ಠಿಯಲ್ಲಿ ಭಾಗವಹಿಸಿ ಅಭಿಪ್ರಾಯಗಳನ್ನು  ಮಂಡಿಸಲಿದ್ದಾರೆ

ಪತ್ರಿಕಾಗೋಷ್ಠಿಯಲ್ಲಿ ಹತ್ತಳ್ಳಿ ದೇವರಾಜ್, ಪಿ ಸೂಮಶೇಖರ್, ಬರಡನಪುರ ನಾಗರಾಜ್, ಕಿರಗಸೂರ ಶಂಕರ,ರಂಗರಾಜು, ಮಾರ್ಬಳ್ಳಿ ನೀಲಕಂಠಪ್ಪ, ಬಸವರಾಜು, ಗೌರಿಶಂಕರ್,  ವೆಂಕಟೇಶ ನಾಗೇಶ ,ಪಟೇಲ್ ಶಿವಮೂರ್ತಿ,ರೇವಣ್ಣ,ಶಿವಣ್ಣ ಇದ್ದರು.

RELATED ARTICLES
- Advertisment -
Google search engine

Most Popular