Saturday, April 19, 2025
Google search engine

Homeರಾಜ್ಯಗಣರಾಜ್ಯೋತ್ಸವ:ಕರ್ನಾಟಕ ಸ್ತಬ್ಧಚಿತ್ರ ತಿರಸ್ಕಾರ ಹಿನ್ನೆಲೆ: ಕೇಂದ್ರ ರಕ್ಷಣಾ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಗಣರಾಜ್ಯೋತ್ಸವ:ಕರ್ನಾಟಕ ಸ್ತಬ್ಧಚಿತ್ರ ತಿರಸ್ಕಾರ ಹಿನ್ನೆಲೆ: ಕೇಂದ್ರ ರಕ್ಷಣಾ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು: ಜನವರಿ 26 ಗಣರಾಜ್ಯೋತ್ಸವ ಪರೇಡ್‌ ನಲ್ಲಿ ಭಾಗವಹಿಸಲು ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿದ ಹಿನ್ನೆಲೆ, ಪರೇಡ್‌ ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ ಕೊಡುವಂತೆ ಕೋರಿ ಇದೀಗ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಟ್ವಿಟ್ಟರ್ ನಲ್ಲಿ ಪತ್ರವನ್ನು ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ‘ನಾನು ರಕ್ಷಣ ಸಚಿವ ರಾಜನಾಥ್ ಸಿಂಗ್ ಅವರಿಗೆ ಗಣರಾಜ್ಯೋತ್ಸವ ಪರೇಡ್‌ ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ಸೇರಿಸಲು ವಿನಂತಿಸಿ ಪತ್ರ ಬರೆದಿದ್ದೇನೆ. ಪತ್ರದಲ್ಲಿ 7 ಕೋಟಿ ಕನ್ನಡಿಗರ ಆಳವಾದ ಭಾವನೆಯನ್ನು ವ್ಯಕ್ತಪಡಿಸಿದ್ದೇನೆ. ಗಣರಾಜ್ಯೋತ್ಸವ ಪರೇಡ್‌ ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ನಿರಾಕರಿಸುವುದು ಕೇವಲ ಪ್ರಮಾದವಲ್ಲ. ಇದು ನಮ್ಮ ರಾಜ್ಯದ ಘನತೆಗೆ ಧಕ್ಕೆಯಾಗಿದೆ. ನಮ್ಮ ಸಾಧನೆಗಳು ರಾಷ್ಟ್ರೀಯ ವೇದಿಕೆಗೆ ಅರ್ಹವಾಗಿವೆ’ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕರ್ನಾಟಕ ಈ ಹಿಂದೆ ಗಣರಾಜ್ಯೋತ್ಸವ ಪರೇಡ್‌ ನಲ್ಲಿ ಹಲವಾರು ಪ್ರಶಸ್ತಿಗಳನ್ನು ಗೆದ್ದಿದೆ. ಈ ಬಾರಿ (2024) ‘ಬ್ರ್ಯಾಂಡ್ ಬೆಂಗಳೂರು’ ಥೀಮ್ ನಮ್ಮದಾಗಿತ್ತು. ರಕ್ಷಣ ಸಚಿವಾಲಯ ಕರೆದ ಎಲ್ಲ ಸಭೆಗಳಲ್ಲಿ ಕರ್ನಾಟಕದ ಪ್ರತಿನಿಧಿಗಳು ಭಾಗಿಯಾಗಿದ್ದರು. ಕೊನೆಯ ಸುತ್ತಿನ ಸಭೆಯ ಬಳಿಕ ಕರ್ನಾಟಕದ ಸ್ತಬ್ದಚಿತ್ರ ಪರಿಗಣಿಸಿಲ್ಲ. ಸ್ತಬ್ದ ಚಿತ್ರದ ಧ್ಯೇಯ ಅಪ್ರತಿಮ ನಗರ ಬೆಂಗಳೂರು ಹೇಗೆ ಅಭಿವೃದ್ಧಿಯಲ್ಲಿ ಪ್ರಗತಿ ಸಾಧಿಸಿದೆ ಮತ್ತು ಸಂಸ್ಕೃತಿ ಮತ್ತು ಸಂಪ್ರದಾಯದಲ್ಲಿ ದೃಢವಾಗಿ ಬೇರೂರಿದೆ ಎಂಬುದನ್ನು ಚಿತ್ರಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

RELATED ARTICLES
- Advertisment -
Google search engine

Most Popular