Saturday, April 19, 2025
Google search engine

Homeಅಪರಾಧಹೊಸಪೇಟೆ: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ, ಇಬ್ಬರ ಬಂಧನ

ಹೊಸಪೇಟೆ: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ, ಇಬ್ಬರ ಬಂಧನ

ಹೊಸಪೇಟೆ: ವಿಜಯನಗರ‌ ಜಿಲ್ಲೆ ಹೊಸಪೇಟೆ ನಗರದಲ್ಲಿ ರಾಣಿಪೇಟೆಯಲ್ಲಿ ವೇಶ್ಯಾವಾಟಿಕೆ ಜಾಲ ಪತ್ತೆಯಾಗಿದ್ದು, ಲಾಡ್ಜ್ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯರನ್ನು ರಕ್ಷಣೆ ಮಾಡಿದ್ದಾರೆ.

ಅಂಗವಿಕಲರು, ಅಪ್ರಾಪ್ತೆಯರನ್ನು ಸಹ ವೇಶ್ಯಾವಾಟಿಕೆ ದಂಧೆಗೆ ಬಳಸಿಕೊಳ್ಳುತ್ತಿದ್ದರು ಎಂಬ  ಮಾಹಿತಿ ಲಭ್ಯವಾಗಿದೆ. ಲಾಡ್ಜ್ ನಲ್ಲಿ ಹೀನಾಯ ಸ್ಥಿತಿಯಲ್ಲಿ ಅಡಗುತಾಣಗಳು ಮಾಡಿಕೊಂಡು ಸ್ವಾಗತಕಾರನ ಕಾಲಿನ ಕೆಳಗೆ ಎಚ್ಚರಿಕೆ ಗಂಟೆಯ ವ್ಯವಸ್ಥೆ ಮಾಡಿಕೊಂಡಿದ್ದ ಎಂದು ಹೇಳಲಾಗಿದೆ. ಪೊಲೀಸರು ದಾಳಿ ಮಾಡಿದ ಸಮಯದಲ್ಲಿ ಕಾಲಿನಿಂದಲೇ ಬೆಲ್ ಒತ್ತಿ ಎಚ್ಚರಿಸುತ್ತಿದ್ದರು ಎನ್ನಲಾಗಿದೆ.

ಒಡನಾಡಿ ಸೇವಾ ಸಂಸ್ಥೆಯ ಸಂಘಟಕ ಶರಿಲ್ ಎ ಅಂತೋನಿ ನೀಡಿದ ನೀಡಿದ ದೂರಿನ ಮೇರೆಗೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಹಿಂದೆ ಆರೋಪಿಗಳ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ.

RELATED ARTICLES
- Advertisment -
Google search engine

Most Popular