ರಾಮನಗರ: ಕಲೆಯನ್ನು ಆಸ್ವಾಧಿಸುವ ಮನಸ್ಥಿತಿ ಬಹಳ ಮುಖ್ಯ.ಓದಿನ ಜೊತೆಯಲ್ಲಿ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಬೆಳೆಸುವ ಉದ್ದೇಶದಿಂದ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಚನ್ನಪಟ್ಟಣ ತಾಲ್ಲೂಕಿನ ಹಾರೋಕೊಪ್ಪಸರ್ಕಾರಿ ಪ್ರೌಢ ಶಾಲೆಯಮುಖ್ಯ ಶಿಕ್ಷಕರಾದ ಕಾಳರಾಜೇಗೌಡ ಅವರುತಿಳಿಸಿದರು.
ಅವರುಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಹಾಗೂ ಹಾರೋಕೊಪ್ಪಗ್ರಾಮ ಪಂಚಾಯಿತಿವತಿಯಿಂದಚನ್ನಪಟ್ಟಣತಾಲ್ಲೂಕಿನ ಹಾರೋಕೊಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಂಸ್ಕೃತಿಕ ಸೌರಭಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಪ್ರತಿಭೆಗಳಲ್ಲಿ ಮುಂದಿರಬೇಕು. ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತಮ್ಮಲ್ಲಿರುವ ಪ್ರತಿಭೆಗಳನ್ನು ಗುರುತಿಸಿಕೊಂಡು ತಮ್ಮ ಗುರುಗಳಿಗೆ ಹಾಗೂ ಶಾಲೆಗೆ ಹೆಸರುತಂದುಕೊಡಬೇಕು.ಜನಪದ ಕಲೆಗಳನ್ನು ಮುಂದಿನ ಪೀಳಿಗೆಯವರೆಗೆ ಉಳಿಸಿ-ಬೆಳೆಸುವುದು ನಮ್ಮೆಲ್ಲರಕರ್ತವ್ಯವಾಗಿದೆಎಂದರು.
ಕಾರ್ಯಕ್ರಮದಲ್ಲಿ ಹಾರೋಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ರತ್ನಮ್ಮ ಶಿವಲಿಂಗಯ್ಯ, ಸದಸ್ಯ ಮಹೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದರಮೇಶ್ ಬಾಬು, ಹಾರೋಕೊಪ್ಪ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕರು ಹಾಗೂ ಇತರರು ಉಪಸ್ಥಿತರಿದ್ದರು.
