ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ಪ್ರತಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಉಚಿತ ಆರೋಗ್ಯ ಶಿಬಿರಗಳನ್ನು ನಡೆಸಲಾಗುವುದು, ಸಾರ್ವಜನಿಕರು ಇವುಗಳ ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕ ಡಿ.ರವಿಶಂಕರ್ ಹೇಳಿದರು.
ಅವರು ತಾಲ್ಲೂಕಿನ ಲಕ್ಷ್ಮಿಪುರ ಗ್ರಾಮದಲ್ಲಿ ಜಿಲ್ಲಾ ಮತ್ತು ತಾಲೂಕು ಆಡಳಿತ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರ, ಮೈಸೂರಿನ ಸುಯೋಗ ಆಸ್ಪತ್ರೆ ಹಾಗೂ ಲಕ್ಷ್ಮಿಪುರ ಗ್ರಾಮ ಪಂಚಾಯಿತಿಗಳ ಸಹಯೋಗದೊಂದಿಗೆ ಆಯೋಜಿಸಿದ್ದ ಉಚಿತ ಮೆಗಾ ಆರೋಗ್ಯ ತಪಾಸಣೆ ಮತ್ತು ಹೃದ್ರೋಗ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯಕ್ಕೆ ಸಂಭಂದಿಸಿದಂತೆಹ ಕಾರ್ಯಕ್ರಮಗಳನ್ನು ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಭಾಗಗಳಲ್ಲೂ ಹಂತಹಂತವಾಗಿ ಮಾಡಲಾಗುವುದು. ಆ ಮೂಲಕ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು. ಪ್ರತಿಯೊಬ್ಬರೂ ಆರೋಗ್ಯವಂತರಾಗಿರಬೇಕು ಎಂಬ ಸದುದ್ದೇಶದಿಂದ ಆಯೋಜಿಸಿರುವ ಇಂತಹ ಆರೋಗ್ಯ ಶಿಬಿರಗಳಲ್ಲಿ ಸಾರ್ವಜನಿಕರ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಮಾಹಿತಿ ನೀಡುವುದು, ಸ್ಥಳದಲ್ಲೇ ಚಿಕಿತ್ಸೆ ಕೊಡುವುದು, ಹೆಚ್ಚಿನ ಚಿಕಿತ್ಸೆ ಅಗತ್ಯವಾಗಿ ಬೇಕಾಗುವ ಜನರಿಗೆ ತಾಲ್ಲೂಕು, ಜಿಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸುವ ಕೆಲಸಮಾಡಲಾಗುತ್ತಿದೆ. ರೈತರು, ಮಹಿಳೆಯರು, ಯುವಜನರು, ವಿದ್ಯಾರ್ಥಿಗಳು, ವೃದ್ದರು ಸೇರಿದಂತೆ ನೂರಾರು ಜನರ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ನೀಡುತ್ತಿರುವ ಉಚಿತ ಆರೋಗ್ಯ ಶಿಬಿರಗಳಲ್ಲಿ ಸರ್ವರೂ ಪಾಲ್ಗೊಂಡು ತಮ್ಮ, ತಮ್ಮ ಕುಟುಂಬದವರುಗಳ ಹಾಗೂ ನಮ್ಮ ಸುತ್ತ ಮುತ್ತ ಇರುವವರ ಆರೋಗ್ಯವನ್ನು ಪರೀಕ್ಷೀಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯವನ್ನು ಹೊಂದಬೇಕು ಆ ಮೂಲಕ ಆರೋಗ್ಯವಂತ ನಾಗರೀಕ ಸಮಾಜ ನಿರ್ಮಾಣ ಮಾಡಬೇಕೆಂದರು.
ಆರೋಗ್ಯ ಶಿಬಿರದಲ್ಲಿ ದಂತ ತಪಾಸಣೆ, ನೇತ್ರ ಪರೀಕ್ಷೆ ಮತ್ತು ಚಿಕಿತ್ಸೆ, ಅಸ್ತಮಾ ಮತ್ತು ದಮ್ಮಿನ ತಪಾಸಣೆ ಮತ್ತು ಚಿಕಿತ್ಸೆ, ಬಿಪಿ ಮತ್ತು ಸಕ್ಕರೆ ಖಾಯಿಲೆ ಪರೀಕ್ಷೆ, ರಕ್ತದ ಗುಂಪು ಪರೀಕ್ಷೆ, ಇಸಿಜಿ, ಉಚಿತ ಜಂತುಹುಳ ಮಾತ್ರೆಗಳ ವಿತರಣೆ ಸೇರಿದಂತೆ ವಿವಿಧ ತಪಾಸಣೆಯನ್ನು ಮಾಡಲಾಯಿತು.

ಶಿಬಿರದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಡಿ.ನಟರಾಜ್, ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಅಶೋಕ್, ವೈದ್ಯರುಗಳಾದ ಡಾ.ಮಂಜುನಾಥ್, ಡಾ.ಸೌಜನ್ಯ, ಡಾ.ಮಮತನಾಯ್ಕ, ಡಾ.ಅಭಿಷೇಕ್, ಡಾ.ಶಿವಮಲ್ಲೇಶ್, ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕೆ.ವಿ.ರಮೇಶ್, ಹೆಚ್.ಜೆ.ಮಹೇಶ್, ನಾಗವೇಣಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ರೇಖಾ, ಸಮುದಾಯ ಆರೋಗ್ಯ ಅಧಿಕಾರಿಗಳಾದ ಐಶ್ವರ್ಯ, ಶ್ವೇತಾಭಗವಾನ್, ಲಾವಣ್ಯ, ಅನುಷ, ಸೌಮ್ಯ, ಕವಿತ, ನೇತ್ರಾವತಿ, ರಬೇಕಾ, ಪ್ರಕಾಶ್, ವಿದ್ಯಾ, ಪ್ರಮೋದ್, ಶಿವಕುಮಾರ್, ಶೇಖರ್, ಶಾರದಮ್ಮ, ಶ್ರೀಮಂತ್, ದಿನೇಶ್ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಕಾರ್ಯನಿರ್ವಹಿಸಿದರು.
ಕಾರ್ಯಕ್ರಮದಲ್ಲಿ ತಾ.ಪಂ.ಮಾಜಿ ಸದಸ್ಯ ಎಲ್.ಎಂ.ಸಣ್ಣಪ್ಪ, ಗ್ರಾ.ಪಂ. ಅಧ್ಯಕ್ಷೆ ಮಣಿಲಾ ಮಂಜುನಾಥ್, ಹುಚ್ಚೇಗೌಡ, ಕೃಷ್ಣೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಉದಯ್ ಶಂಕರ್, ಮಹದೇವ್, ವಕ್ತಾರ ಜಾಬೀರ್, ರೂಪಮಂಜುನಾಥ್, ಯೋಗೇಶ್, ಸಯ್ಯದ್ ಅಹಮದ್, ಸುದೀಪ್, ರಂಗೇಗೌಡ, ಅನಿಲ್, ಪಾಪಣ್ಣ, ಪ್ರತಾಪಚಾರಿ, ಮೂರ್ತಿ, ದೀಪು, ಡೈರಿಮಹೇಶ್, ಅಣ್ಣಯ್ಯ, ಚಿಕ್ಕಕೊಪ್ಪಲು ಗಿರೀಶ್ ಮುಖ್ಯಶಿಕ್ಷಕ ಲೋಹಿತಾಶ್ವ, ಎಸ್‌ಡಿಎಂಸಿ ಅಧ್ಯಕ್ಷ ಪುರುಷೋತ್ತಮ್ ಸೇರಿದಂತೆ ಹಲವರು ಇದ್ದರು.