Sunday, April 20, 2025
Google search engine

Homeರಾಜ್ಯಸುದ್ದಿಜಾಲರಾಷ್ಟೀಯ ಯುವ ದಿನವು ಯುವಕರಿಗೆ ಪ್ರೇರಣೆಯಾಗಲಿ : ಪಿ.ರವಿಕುಮಾರ್

ರಾಷ್ಟೀಯ ಯುವ ದಿನವು ಯುವಕರಿಗೆ ಪ್ರೇರಣೆಯಾಗಲಿ : ಪಿ.ರವಿಕುಮಾರ್

ಮಂಡ್ಯ: ವಿವೇಕಾನಂದರು ತಮ್ಮ ೩೫ನೇ ವಯಸ್ಸಿನಲ್ಲಿಯೇ ಮಹಾನ್ ಸಾಧನೆಯನ್ನು ಮಾಡಿದ್ದರಿಂದ ಅವರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸಲಾಗುತ್ತದೆ. ವಿವೇಕಾನಂದರ ಸಾಧನೆ ಹಾಗೂ ರಾಷ್ಟೀಯ ಯುವ ದಿನ ಯುವಕರಿಗೆ ಪ್ರೇರಣೆಯಾಗಲಿ ಎಂದು ಮಂಡ್ಯವಿಧಾನಸಭಾ ಕ್ಷೇತ್ರದ ಶಾಸಕ ಪಿ.ರವಿಕುಮಾರ್ ಅವರು ತಿಳಿಸಿದರು. ಮಂಡ್ಯ ವಿಶ್ವವಿದ್ಯಾಲಯ, ವಿಶ್ವ ಮಾನವ ಸಭಾಂಗಣದ ಶಾರದಾ ಮಂದಿರದಲ್ಲಿ ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ವಿಶ್ವವಿದ್ಯಾಲಯ, ಹಾಗೂ ಎನ್. ಎಸ್. ಎಸ್ ಘಟಕಗಳು ಇವರ ಸಹಯೋಗದಲ್ಲಿ ಆಯೋಜಿಸಲಾಗಿರುವ ದಿವ್ಯ ಚೇತನ ಸ್ವಾಮಿ ವಿವೇಕಾನಂದ ರವರ ೧೬೧ನೇ ಜನ್ಮ ದಿನಾಚರಣೆ ಹಾಗೂ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮವನ್ನು ಅವರು ಮಂಡ್ಯ ವಿಶ್ವವಿದ್ಯಾಲಯದಲ್ಲಿ ಉದ್ಘಾಟಸಿ, ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಫಾರ್ಚನೆ ಮಾಡಿ ಮಾತನಾಡಿದರು.

ರಾಷ್ಟೀಯ ಯುವ ದಿನದಂದು ರಾಜ್ಯ ಸರ್ಕಾರವು ಯುವನಿಧಿ ಯೋಜನೆಯನ್ನು ಉದ್ಘಾಟಿಸುತ್ತಿರುವುದು ಸಂತೋಷದ ವಿಷಯವಾಗಿದ್ದು, ಈ ಯೋಜನೆಯ ಸೌಲಭ್ಯವನ್ನು ಎಲ್ಲಾ ಅರ್ಹ ಅಭ್ಯರ್ಥಿಗಳು ಪಡೆದುಕೊಳ್ಳಬೇಕು ಎಂದರು.
ಜನವರಿ ೧೨ರಂದು ದೇಶದ ಎಲ್ಲಡೆ ವಿವೇಕಾನಂದರ ಜನ್ಮದಿನವನ್ನು ಆಚರಿಸಲಾಗುವುದು. ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬ ವಿವೇಕಾನಂದರು ಘೋಷಣೆಯಂತೆ ಯುವಜನರು ಎಚ್ಚರಗೊಳ್ಳಿ ಎಂಬ ಕರೆ ನೀಡಿದರು. ಸ್ಟುಡೆಂಟ್ ಲೈಫ್ ಇಸ್ ಗೋಲ್ಡನ್ ಲೈಫ್ ಆದ್ದರಿಂದ ವಿದ್ಯಾರ್ಥಿಗಳು ಯಾವುದೇ ಪಾರ್ಕ್, ಪಬ್, ಹಾಗೂ ಇನ್ನಿತರ ಬೇಡದ ವಿಚಾರಗಳಲ್ಲಿ ಪಾಲ್ಗೊಳ್ಳದೆ, ನಿರ್ದಿಷ್ಟ ಗುರಿಯನ್ನು ಇರಿಸಿಕೊಂಡು ತಮ್ಮ ವಿದ್ಯಾರ್ಥಿ ಜೀವನವನ್ನು ಸದುಪಯೋಗ ಮಾಡಿಕೊಳ್ಳಬೇಕು. ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಓದಿನಿಂದ ಗುರಿ ಮುಟ್ಟಲು ಸಾಧ್ಯವಾಗುವುದಿಲ್ಲ. ಆದ್ದರಿಂದ ತಮ್ಮ ಬುದ್ಧಿ ಶಕ್ತಿ ಹಾಗೂ ಕೌಶಲ್ಯವನ್ನು ಹೆಚ್ಚಿಸಿಕೊಂಡು ತಮ್ಮ ಗುರಿಯಡೆಗೆ ಸಾಗಬೇಕು ಎಂದರು.

ಸ್ವಾಮಿ ವಿವೇಕಾನಂದರು ಭಾರತದ ಸಂಸ್ಕೃತಿಯನ್ನು ಅಮೆರಿಕ ಸೇರಿದಂತೆ ಇಡೀ ವಿಶ್ವಕ್ಕೆ ಪರಿಚಯ ಮಾಡಿಕೊಟ್ಟರು.ತಮ್ಮ ಭಾಷಣದ ಮೂಲಕ ಇಡೀ ವಿಶ್ವವನ್ನು ಬೆರಗುಗೊಳಿಸಿದರು. ಆದ್ದರಿಂದ ವಿವೇಕಾನಂದರ ತತ್ವಾದರ್ಶವನ್ನು ನಿಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದರು. ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚು ಕಾಡುತ್ತಿದ್ದು, ಈ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಲು ಬಸರಾಳು ಗ್ರಾಮದಲ್ಲಿ ಕಾರ್ಖಾನೆಯನ್ನು ನಿರ್ಮಾಣ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದ್ದೇವೆ. ಜಿಲ್ಲೆಯಲ್ಲಿ ೭೫ ಎಕರೆಯ ಜಾಗದಲ್ಲಿ ಸಾಫ್ಟ್ ವೇರ್ ಕಂಪನಿಯನ್ನು ನಿರ್ಮಾಣ ಮಾಡಿ ಯುವಕರಿಗೆ- ಯುವತಿಯರಿಗೆ ಉದ್ಯೋಗ ಕಲ್ಪಿಸುವ ಹಾಗೂ ಹೊಸ ಶುಗರ್ ಫ್ಯಾಕ್ಟರಿಯನ್ನು ನಿರ್ಮಾಣ ಮಾಡಲು ಮಾನ್ಯ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗ ಹಾಗೂ ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತರಾದ ಕೆ. ನಾಗಣ್ಣಗೌಡ, ಬೆಂಗಳೂರು ಕರ್ನಾಟಕ ಸರ್ವೋದಯ ಮಂಡಳಿ ಅಧ್ಯಕ್ಷ ಎಚ್. ಎಸ್ ಸುರೇಶ್, ಮಂಡ್ಯ ವಿಶ್ವ ವಿದ್ಯಾನಿಲಯದ ಕುಲಪತಿ ಡಾ. ಪುಟ್ಟರಾಜು ಮಹಿಳಾ ಸರ್ಕಾರಿ ಕಾಲೇಜು ಪ್ರಾಧ್ಯಪಕರು ಹಾಗೂ ಎನ್.ಎಸ್.ಎಸ್ ಕಾರ್ಯಕ್ರಮದ ಅಧಿಕಾರಿ ಕೆಂಪಮ್ಮ ಸೇರಿದಂತೆ ಇನ್ನಿತರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿವೇಕಾನಂದರ ಜನ್ಮ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಚಿತ್ರಕಲೆ ಭಾಷಣ ಹಾಗೂ ಲಿಖಿತ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.

RELATED ARTICLES
- Advertisment -
Google search engine

Most Popular