ಚಾಮರಾಜನಗರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧಿಶರಾದ ಎಂ. ಶ್ರೀಧರ ಅವರು ತಾಲೂಕಿನ ಮರಿಯಾಲದ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪಣ್ಯದಹುಂಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು.
ಮರಿಯಾಲದ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದ ಸ್ವಚ್ಚತೆ, ವೈದ್ಯರು ಹಾಗೂ ಸಿಬ್ಬಂದಿಗ ಕರ್ತವ್ಯದ ಬಗ್ಗೆ ಪರಿಶೀಲಿಸಿದರು. ಆರೋಗ್ಯ ಕೇಂದ್ರಕ್ಕೆ ಬರುವ ರೋಗಿಗಳಿಗೆ ಜನಸ್ನೇಹಿಯಾಗಿ ಉತ್ತಮ ವೈದ್ಯಕೀಯ ಸೇವೆಯನ್ನು ನೀಡುವಂತೆ ಸೂಚಿಸಿದರು.
ಪಣ್ಯದಹುಂಡಿ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಔಷಧಾಲಯ, ಲ್ಯಾಬ್, ವಾರ್ಡ್‍ಗಳನ್ನು ಪರಿಶೀಲಿಸಿದರು. ರೋಗಿಗಳಿಗೆ ಉಚಿತ ಔಷಧಿಗಳನ್ನು ನೀಡುವಂತೆ ಸೂಚಿಸಿದರು. ಆರೋಗ್ಯ ಕೇಂದ್ರದ ಪರಿಸರವನ್ನು ಉತ್ತಮವಾಗಿ ಕಾಪಾಡಿಕೊಳ್ಳಬೇಕು. ವಿಕಲಚೇತನರು ಆರೋಗ್ಯ ಕೇಂದ್ರಕ್ಕೆ ಬರಲು ರ್ಯಾಂಪ್ (ಇಳಿಜಾರು) ಸೌಲಭ್ಯ ಹಾಗೂ ಸೂಕ್ತ ಪ್ರವೇಶ ದ್ವಾರವನ್ನು ಮಾರ್ಪಡಿಸಲು ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಶ್ರೀಧರ ಅವರು ಸೂಚನೆ ನೀಡಿದರು.