ಹಾವೇರಿ: ಹಾನಗಲ್ ನಲ್ಲಿ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತಿಬ್ಬರು ಆರೋಪಿಗಳ ಬಂಧಿಸಿದ್ದಾರೆ.
ಸಂತೆ ವ್ಯಾಪಾರ ಮಾಡುತ್ತಿದ್ದ ಸಾದಿಕ್ ಬಾಬುಸಾಬ್ ಅಗಸಿಮನಿ(29) ಮತ್ತು ಹೋಟೆಲ್ ಕೆಲಸ ಮಾಡುತ್ತಿದ್ದ ಶೋಯೆಬ್(19) ಬಂಧಿತರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಏಳು ಆರೋಪಿಗಳ ಬಂಧನವಾಗಿದೆ.
ಮತ್ತೋರ್ವ ಆರೋಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.