Monday, April 21, 2025
Google search engine

Homeರಾಜಕೀಯಅನಂತ ಕುಮಾರ್ ಹೆಗಡೆ ಒಬ್ಬ ಹುಚ್ಚ. ಅವನ ಬಗ್ಗೆ ಮಾತನಾಡುವುದಿಲ್ಲ: ಮಾಜಿ ಸಚಿವ ಹೆಚ್. ಆಂಜನೇಯ

ಅನಂತ ಕುಮಾರ್ ಹೆಗಡೆ ಒಬ್ಬ ಹುಚ್ಚ. ಅವನ ಬಗ್ಗೆ ಮಾತನಾಡುವುದಿಲ್ಲ: ಮಾಜಿ ಸಚಿವ ಹೆಚ್. ಆಂಜನೇಯ

ಚಿತ್ರದುರ್ಗ: ಅನಂತ ಕುಮಾರ್ ಹೆಗಡೆ ಒಬ್ಬ ಹುಚ್ಚ. ಹುಚ್ಚರ ಬಗ್ಗೆ ಯಾರಾದರೂ ಮಾತನಾಡುತ್ತಾರಾ? ಅವನ ಬಗ್ಗೆ ಮಾತನಾಡುವುದಿಲ್ಲ ಎಂದ ಮಾಜಿ ಸಚಿವ ಹೆಚ್. ಆಂಜನೇಯ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಅವನ ಬಗ್ಗೆ ಮಾತಾಡಿದರೆ ದೊಡ್ಡವನನ್ನಾಗಿಸಿದಂತೆ ಆಗುತ್ತದೆ. ಅವನು ಬೆಳೆದ ಹಿನ್ನೆಲೆ ಸಂಸ್ಕೃತಿ ಅದೇ ರೀತಿ ಇರಬೇಕು. ಹೀಗಾಗಿ ಅವನು ಆ ರೀತಿ ವರ್ತನೆ ಮಾಡುತ್ತಾನೆ. ನಾವು ಆ ರೀತಿ ಅಲ್ಲ, ನಾನು ಸಹ ಏಕವಚನ ಬಳಸಬಾರದು. ಆದರೆ ಅವನಿಗೆ ಯಾವ ಭಾಷೆ ಬಳಸಿದರೂ ಕೂಡ ಸಾಲದು. ನಮ್ಮ ನಾಡಿನ ದೊರೆ ಮುಖ್ಯಮಂತ್ರಿ ಸಿದ್ಧರಾಮಯ್ಯ. ರಾಮರಾಜ್ಯದ ಕನಸು ಅನಾವರಣ ಮಾಡಿ ಕಾರ್ಯರೂಪಕ್ಕೆ ತಂದವರು. ಜನ ಮೆಚ್ಚಿದ ಸಿದ್ಧರಾಮಯ್ಯ ಬಗ್ಗೆ ಹಗುರವಾಗಿ ಮಾತಾಡ್ತಾನಲ್ಲ, ಅವನು ಮನುಷ್ಯನಾ ಎಂದು ಅನಂತ ಕುಮಾರ್ ಹೆಗಡೆ ವಿರುದ್ಧ ಕಿಡಿಕಾರಿದರು.

ಕಾಂಗ್ರೆಸ್ ಸರ್ಕಾರ ಹಿಂಧೂ ಧರ್ಮ, ಶ್ರೀರಾಮನ ವಿರೋಧಿ ಎಂಬ ಸಂಸದ ಮುನಿಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಬಹಳಷ್ಟು ಜನ ಹಿಂದೂಗಳಿರುವುದೇ ಕಾಂಗ್ರೆಸ್ ಪಕ್ಷದಲ್ಲಿ. ಹಿಂದೂ ಧರ್ಮ, ರಾಮ ಪೂಜೆ ಮಾಡುವವರು ಹೆಚ್ಚಿರುವುದು ಕಾಂಗ್ರೆಸ್ ಪಕ್ಷದಲ್ಲಿ. ರಾಮನ ಹೆಸರಿನಲ್ಲಿ ಮತಕ್ಕಾಗಿ ಮಾರ್ಕೆಂಟಿಂಗ್ ಮಾಡುವವರು ಕಾಂಗ್ರೆಸ್ಸಿಗರಲ್ಲ ಎಂದರು.

ಕೋಟ್ಯಾಂತರ ಕಾಂಗ್ರೆಸ್ಸಿಗರ ಹೃದಯದಲ್ಲಿ ರಾಮನಿದ್ದಾನೆ. ಆಂಜನೇಯನ ಹೃದಯದಲ್ಲಿ ರಾಮನಿದ್ದಂತೆ ಕಾಂಗ್ರೆಸ್ಸಿಗರ ಹೃದಯದಲ್ಲಿ ರಾಮ. ನಾವು ರಾಮನ ವಿರೋಧಿ ಅಲ್ಲ, ಹಿಂದೂಗಳ ವಿರೋಧಿ ಅಲ್ಲ. ಹಿಂದೂಗಳ ಪರ, ಮುಸ್ಲಿಂ ಪರ ಎಲ್ಲಾ ಧರ್ಮಗಳ ಜನರ ಪರವಿದ್ದೇವೆ ಎಂದು ಹೆಚ್.ಆಂಜನೇಯ ಹೇಳಿದರು.

RELATED ARTICLES
- Advertisment -
Google search engine

Most Popular