ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ಕೀಳು ಮಟ್ಟದ ಭಾಷೆ ಪ್ರಯೋಗಿಸಿ ನಿಂದಿಸಿರುವ ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆಯಲ್ಲಿ ವಕೀಲರಾದ ಪುಟ್ಟಸಿದ್ದೇಗೌಡ ಖಂಡಿಸಿದ್ದಾರೆ.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿ ವಿರುದ್ಧ ಹೆಗಡೆ ಹೇಳಿಕೆ ರಾಜ್ಯದ ಜನತೆಗೆ ಮಾಡಿದ ಅವಮಾನ. ರಾಜ್ಯದಲ್ಲಿ ಸಾಮರಸ್ಯ ಕದಡುವುದು, ಕೋಮುಗಲಭೆ ಸೃಷ್ಟಿಸುವ ಉದ್ದೇಶದಿಂದ ಹೆಗಡೆ ಇಂತಹ ಅನಾಗರಿಕ ಹೇಳಿಕೆ ನೀಡಿದ್ದಾರೆ. ಇವರ ವಿರುದ್ಧ ಸರ್ಕಾರ ಮಾನಹಾನಿ ಪ್ರಕರಣ ದಾಖಲಿಸಬೇಕು. ಸೌಹಾರ್ದತೆಯಿಂದ ಬದುಕುತ್ತಿರುವ ಜನರ ನಡುವೆ ಹೆಗಡೆ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಇಂತಹವರನ್ನು ಹದ್ದುಬಸ್ತಿನಲ್ಲಿ ಇಡಬೇಕೆ ಎಂದು ಅವರು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ವಕೀಲರಾದ ಟಿ.ಮಂಜುನಾಥ್, ಎನ್.ಲಕ್ಷ್ಮಣ್, ಎಸ್.ಪುನೀತ್ ಇದ್ದರು.