Tuesday, April 22, 2025
Google search engine

Homeರಾಜ್ಯಅಯೋಧ್ಯೆಗೆ ಹೋಗಬೇಕೆಂಬ ಇಚ್ಛೆ ಇದೆ. ಹೋಗಲು ಪ್ರಯತ್ನಿಸುತ್ತೇನೆ: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು

ಅಯೋಧ್ಯೆಗೆ ಹೋಗಬೇಕೆಂಬ ಇಚ್ಛೆ ಇದೆ. ಹೋಗಲು ಪ್ರಯತ್ನಿಸುತ್ತೇನೆ: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು

ತುಮಕೂರು: ನಾನು ಅಯೋಧ್ಯೆಗೆ ಹೋಗಬೇಕೆಂಬ ಇಚ್ಛೆ ಇದೆ. ಹೋಗುವ ಪ್ರಯತ್ನ ಮಾಡುತ್ತೇನೆ. ಆರೋಗ್ಯ ನೋಡಿಕೊಳ್ಳಬೇಕಾಗಿದೆ. ಈ ನಡುವೆ ನಿಜವಾಗಿಯೂ ಹೋಗುವ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ತಿಳಿಸಿದ್ದಾರೆ.

ಹಂಗರಹಳ್ಳಿ ವಿದ್ಯಾ ಚೌಡೇಶ್ವರಿ ಸನ್ನಿಧಿಯಲ್ಲಿ ಪೂಜೆ ಬಳಿಕ ಮಾತನಾಡಿದ ಅವರು, ಶ್ರೀ ಕ್ಷೇತ್ರದಲ್ಲಿ ಯಾವುದೇ ರಾಜಕೀಯ ಹೇಳಿಕೆಯನ್ನ ಕೊಡುವುದಿಲ್ಲ ಎಂದರು.

ಶ್ರೀ ಬಾಲ ಮಂಜುನಾಥ ಶ್ರೀಗಳು ಶ್ರೀ ಕ್ಷೇತ್ರಕ್ಕೆ ಬರಲು ಆಹ್ವಾನ ನೀಡಿದ್ದರು. ವಿದ್ಯಾ ಚೌಡೇಶ್ವರಿಯ ಉತ್ತರಾಯಣ ಪುಣ್ಯಕಾಲ ಇದು. ಅತ್ಯಂತ ವಿಶೇಷವಾಗಿ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ.  ವರ್ಧಂತಿ ಉತ್ಸವ ಮತ್ತು ಅಮ್ಮನವರ ಚಿಕ್ಕಮ್ಮ ಜಾತ್ರೆಯು ಶಾಸ್ತ್ರೋಕ್ತವಾಗಿ ನಡೆದಿದೆ. ನಾನು ಉಪವಾಸ ವ್ರತ ಕೈಗೊಂಡು, ಶ್ರೀ ಚೌಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ್ದೇನೆ ಎಂದರು.

ನನ್ನ ಎರಡು ಮಂಡಿ ಚೆನ್ನಾಗಿಲ್ಲ, ಆದರೂ ಕೂಡ ದೀರ್ಘ ದಂಡ ನಮಸ್ಕಾರ ಮಾಡಿದ್ದೇನೆ.  ಇಲ್ಲಿ ನಡೆದಂತಹ ಹೋಮ ಅತ್ಯಂತ ವಿಶೇಷವಾಗಿತ್ತು. ಶ್ರೀ ವಿದ್ಯಾ ಚೌಡೇಶ್ವರಿ ದೇವಿಗೆ ಒಂದು ಕಿರೀಟವನ್ನು ನಾನು ಧಾರಣೆ ಮಾಡಿಸಿದ್ದೇನೆ. ಶ್ರೀ ಚೌಡೇಶ್ವರಿ ದೇವಿಯ ಶಕ್ತಿಯಿಂದಾಗಿ ಮೂರು ಬಾರಿ ನಾನು ಪ್ರದಕ್ಷಿಣೆ ಮಾಡಿದ್ದೇನೆ. ಶ್ರೀ ಚೌಡೇಶ್ವರಿ ದೇವಿಗೆ ಧರಿಸಿದ ವಜ್ರದ ಕಿರೀಟ ದೇವಸ್ಥಾನದಿಂದಲೇ ಕೊಟ್ಟಿರುವುದು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಶ್ರೀ ಚೌಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಹೋದರು. ನನಗೂ ಇಲ್ಲಿ ಹೋಗುವಂತೆ ಹೇಳಿದರು, ಹಾಗಾಗಿ ಬಂದು ಪೂಜೆ ಸಲ್ಲಿಸಿದ್ದೇನೆ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular