ವರದಿ : ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೆಲುವು ತಮ್ಮದಾಗಲು ಮೈಸೂರು ಜಿಲ್ಲೆಯಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಎಂದು ವಸ್ತು ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಿರ್ಲೆ ಶ್ರೀನಿವಾಸ ಗೌಡ ಹೇಳಿದರು.
ಮೈಸೂರಿನ ಬಿಜೆಪಿ ಕಚೇರಿಯಲ್ಲಿ ನೂತನ ಮೈಸೂರು ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು.
ಬಿಜೆಪಿ ಕಾರ್ಯಕರ್ತರು ಅಧಿಕಾರ ಇರಲಿ ಬಿಡಲಿ ಹೋರಾಟದಿಂದ ಹಿಂದೆ ಸರಿದ ಉದಾಹರಣೆಗಳಿಲ್ಲ ಬೂತ್ ಮಟ್ಟದಿಂದ ಕಾರ್ಯಕರ್ತರನ್ನು ಸಂಘಟಿಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜೇಂದ್ರ ಅವರ ಕೈ ಬಲಪಡಿಸಿ ಎಂದು ಕಿವಿ ಮಾತು ಹೇಳಿದರು.
ಈ ಸಂದರ್ಭದಲ್ಲಿ ಕೆ.ಆರ್.ನಗರ ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಪ್ರಭಾಕರ್ ಜೈನ್, ಮಾಜಿ ಎಪಿಎಂಸಿ ಮಾಜಿ ನಿರ್ದೇಶಕ ಹೊಸೂರು ಅನಿಲ್ ಕುಮಾರ್, ಮುಖಂಡರಾದ ಬಸವರಾಜು,ಶಿವಕುಮಾರ್,ರೈತ ಸಂಘದ ಶಿವರಾಜು ,ಹೊಸೂರು ಅಶ್ವಿನ್ ಸೇರಿದಂತೆ ಮತ್ತಿತರರು ಹಾಜರಿದ್ದರು.