Sunday, April 20, 2025
Google search engine

Homeಸ್ಥಳೀಯಬರ ಪರಿಹಾರ: ಫ್ರೂಟ್ಸ್ ನವೀಕರಣ ಶೇ.೭೫ ಮೀರಿಲ್ಲ-ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

ಬರ ಪರಿಹಾರ: ಫ್ರೂಟ್ಸ್ ನವೀಕರಣ ಶೇ.೭೫ ಮೀರಿಲ್ಲ-ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

ಮೈಸೂರು : ರೈತರಿಗೆ ಬರ ಪರಿಹಾರ ನೀಡುವುದಕ್ಕಿಂತ ಮುಖ್ಯವಾದ ಬೇರೆ ಕೆಲಸ ಇದೆಯಾ? ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಬುಧವಾರ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, “ಬರ ಪರಿಹಾರ ಹಣದ ದುರ್ಬಳಕೆ ತಡೆಯುವ ಹಾಗೂ ರೈತರಿಗೆ ಶೀಘ್ರ ಪರಿಹಾರ ನೀಡುವ ಸಲುವಾಗಿ ರೈತರ ಜಮೀನಿನ ವಿಸ್ತೀರ್ಣದ ಮಾಹಿತಿಯನ್ನು “ಫ್ರೂಟ್ಸ್” ತಂತ್ರಾಂಶದಲ್ಲಿ ನವೀಕರಿಸುವಂತೆ ಆದೇಶಿಸಿ ಹಲವು ತಿಂಗಳಾಗಿದೆ. ಆದರೂ, ಮೈಸೂರಿನಲ್ಲಿ ಫ್ರೂಟ್ಸ್ ನವೀಕರಣ ಶೇ.೭೫ ಮೀರಿಲ್ಲ” ಎಂದು ಅಸಮಾಧಾನ ಹೊರಹಾಕಿದರು.

ಬರಗಾಲದ ಕಾರಣಕ್ಕೆ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಪರಿಹಾರ ಕೇಳಿ ಕೇಂದ್ರಕ್ಕೆ ಮೆಮೊರಾಂಡಮ್ ಸಲ್ಲಿಸಿದ್ದು, ಕೇಂದ್ರದ ತಂಡವೂ ರಾಜ್ಯಕ್ಕೆ ಆಗಮಿಸಿ ಬರ ಅಧ್ಯಯನ ನಡೆಸಿದೆ. ಆದರೂ ಕೇಂದ್ರದಿಂದ ಪರಿಹಾರ ಹಣ ಬಂದಿಲ್ಲ. ಹೀಗಾಗಿ ಮೊದಲ ಕಂತಿನ ಹಣವನ್ನು ರಾಜ್ಯ ಸರ್ಕಾರವೇ ಭರಿಸಲು ನಿರ್ಧರಿಸಿದೆ. ಆದರೆ, ಫ್ರೂಟ್ಸ್ ನವೀಕರಿಸದೆ ಅಧಿಕಾರಿಗಳು ಅಸಡ್ಡೆ ತೋರುವುದು ಸರಿಯಲ್ಲ ಎಂದು ಕಿಡಿಕಾರಿದರು. ಫ್ರೂಟ್ಸ್ ತಂತ್ರಾಂಶ ನವೀಕರಿಸದೆ ರೈತರಿಗೆ ನ್ಯಾಯಯುತ ಪರಿಹಾರ ನೀಡುವುದು ಸಾಧ್ಯವಿಲ್ಲ. ರೈತರು ತಮ್ಮ ಜಮೀನಿನ ವಿಸ್ತೀರ್ಣವನ್ನು ನಮೂದಿಸಲು ಮುಂದಾಗದಿದ್ದರೆ ಜಿಲ್ಲಾಧಿಕಾರಿ ಹಾಗೂ ತಹಶಿಲ್ದಾರರು ಪತ್ರಿಕಾ ಪ್ರಕಟಣೆ ನೀಡಿ ರೈತರಲ್ಲಿ ಅರಿವು ಮೂಡಿಸಿ ಮುಂದಿನ ವಾರದಲ್ಲಿ ನವೀಕರಣದ ಕೆಲಸ ಮುಗಿಸಿ ಎಂದು ಗಡುವು ನೀಡಿದರು.

ಮೇವು ಪೂರೈಕೆಗೆ ಸೂಚನೆ: ಜನವರಿ, ಫೆಬ್ರುವರಿ ಮತ್ತು ಮಾರ್ಚ್‌ನಲ್ಲಿ ಜಾನುವಾರುಗಳಿಗೆ ಮೇವಿನ ಪೂರೈಕೆಗೆ ಅನುಕೂಲವಾಗುವಂತೆ ರಾಜ್ಯಾದ್ಯಂತ ೭,೬೩,೦೦೦ ಮೇವಿನ ಬೀಜದ ಕಿಟ್‌ಗಳನ್ನು ವಿತರಿಸಲಾಗಿದೆ. ಈ ಕಿಟ್‌ಗಳನ್ನು ಗ್ರಾಮಪಂಚಾಯತಿ ಮಟ್ಟದಲ್ಲಿ ಪಾರದರ್ಶಕವಾಗಿ ವಿತರಿಸಬೇಕು. ಈ ಕೆಲಸಕ್ಕೆ ಹಾಲು ಉತ್ಪಾಕರ ಸಹಕಾರ ಸಂಘದ ಸಹಾಯ ಪಡೆದುಕೊಳ್ಳಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು

ಮೈಸೂರು ಜಿಲ್ಲೆಯಲ್ಲಿ ಒಟ್ಟು ೧೧೦ ಕಂದಾಯ ಗ್ರಾಮಗಳನ್ನು ಗುರುತಿಸಲಾಗಿದೆ. ಆದರೆ, ಈವರೆಗೆ ೫೨ ಗ್ರಾಮಗಳಿಗೆ ಮಾತ್ರ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಬಾಕಿ ಉಳಿದ ಗ್ರಾಮಗಳನ್ನೂ ಶೀಘ್ರವಾಗಿ ಕಂದಾಯ ಗ್ರಾಮಗಳೆಂದು ಘೋಷಿಸಿ. ಜಿಲ್ಲೆಯಲ್ಲಿ ಒಟ್ಟಾರೆ ೨೦೧೬೩ ಮನೆಗಳಿಗೆ ಹಕ್ಕುಪತ್ರ ನೀಡಬೇಕಿದ್ದು, ೨೮೮೪ ಮನೆಗಳಿಗೆ ಮಾತ್ರ ಹಕ್ಕುಪತ್ರ ನೀಡಲಾಗಿದೆ. ಹೀಗಾಗಿ ಉಳಿದ ಮನೆಗಳಿಗೂ ಶೀಘ್ರ ಹಕ್ಕುಪತ್ರ ನೀಡಲು ಕ್ರಮವಹಿಸಿ. ಅಲ್ಲದೆ, ಮತ್ತಷ್ಟು ಅರ್ಹ ಗ್ರಾಮಗಳಿದ್ದರೆ, ಸರ್ಕಾರಕ್ಕೆ ಶೀಘ್ರ ಪ್ರಸ್ತಾವನೆ ಸಲ್ಲಿಸಿ ಬಡವರ ಪರವಾಗಿ ಕೆಲಸ ಮಾಡಿ ಎಂದು ಅವರು ಕಿವಿಮಾತು ಹೇಳಿದರು.

ಈ ಬಗ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಅವರು, “ಈ ಹಿಂದೆ ಬಗರ್ ಹುಕುಂ ಸಾಗುವಳಿ ಚೀಟಿ ನೀಡುವ ವೇಳೆ ಅನರ್ಹರಿಗೂ ಜಮೀನು ಮಂಜೂರು ಮಾಡಲಾಗಿದೆ. ನಿಯಮ ಮೀರಿ ಸಾಕಷ್ಟು ಅಕ್ರಮ ನಡೆಸಲಾಗಿದೆ. ಆದರೆ ಈ ಬಾರಿ ಅಂತಹ ಯಾವುದೇ ಪ್ರಹಸನಗಳಿಗೆ ಆಸ್ಪದ ಇರಬಾರದು. ಬಗರ್ ಹುಕುಂ ಸಭೆಯ ಬಯೋ ಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿ ಪಡೆಯಬೇಕು” ಎಂದು ತಾಕೀತು ಮಾಡಿದರು.

RELATED ARTICLES
- Advertisment -
Google search engine

Most Popular