ಬಳ್ಳಾರಿ: ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ಕಲಿಕೆಯಲ್ಲಿ ಆಸಕ್ತಿ ಮೂಡಿಸಬೇಕು. ಇದರಿಂದ ಜೀವನ ಮತ್ತು ಉದ್ಯೋಗದ ಬಗ್ಗೆ ಆಶಾಭಾವನೆ ಮೂಡಿ ಫಲಿತಾಂಶ ಸುಧಾರಿಸಲು ಸಹಕಾರಿಯಾಗುತ್ತದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದರು.
ಎಸ್.ಎಸ್.ಎಲ್.ಸಿ ನಂತರ ಮುಂದೇನು: ಮೋಕಾ ಕರ್ನಾಟಕ ಪಬ್ಲಿಕ್ ಸ್ಕೂಲ್ ಮತ್ತು ಬಳ್ಳಾರಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಭೇಟಿ ನೀಡಿ ವೃತ್ತಿ ಮಾರ್ಗದರ್ಶನ ಕುರಿತು ಮಾತನಾಡಿದರು. ಇತ್ತೀಚೆಗೆ ಬೆಂಗಳೂರಿನ ನಿರ್ಮಾಣ್ ಸಂಸ್ಥೆಯಿಂದ ಎಸ್. ಎಸ್ ಎಲ್ ಸಿ ನಂತರ ಮುಂದೇನು: ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ವೃತ್ತಿ ಮಾರ್ಗದರ್ಶನ ಕುರಿತು ತರಬೇತಿ ನೀಡಲಾಯಿತು. ತರಬೇತಿ ಪಡೆದವರು ನಿಯೋಜನೆಗೊಂಡಿರುವ ಶಾಲೆಗಳಿಗೆ ಭೇಟಿ ನೀಡಿ ಮಾರ್ಗದರ್ಶನ ನೀಡುತ್ತಿದ್ದೇವೆ ಎಂದರು. ತರಬೇತಿ ಕಾರ್ಯಕ್ರಮದ ಆಯೋಜನೆಯಿಂದ ಮಕ್ಕಳು ಅಭ್ಯಾಸ ಮಾಡುತ್ತಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದರು.
ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಮಾತನಾಡಿ, ತರಬೇತಿಯಿಂದ ಹಲವು ವೃತ್ತಿಗಳ ಮೇಲೆ ಹೆಚ್ಚಿನ ಬೆಳಕು ಚೆಲ್ಲುವ ಜತೆಗೆ ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚುತ್ತದೆ. ಜೊತೆಗೆ ಕಲಿಕೆಯ ಗುಣಮಟ್ಟ ಹೆಚ್ಚಿಸಲು ಸಹಕರಿಸಲು ಎಸ್. ಎಸ್.ಎಲ್.ಸಿ ಫಲಿತಾಂಶ ಸುಧಾರಿಸಲಿ ಎಂಬ ಆಶಯದ ಮಾತು ಹೇಳಿದರು. ಈ ಸಂದರ್ಭದಲ್ಲಿ ತರಬೇತಿ ಪಡೆದ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಇಲಾಖೆಗಳ ಸಿಬ್ಬಂದಿಗಳು ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು ಹಾಗೂ ಮಕ್ಕಳಿಗೆ ತರಬೇತಿ ನೀಡಿದರು.