Saturday, April 19, 2025
Google search engine

Homeರಾಜ್ಯಕಾಂಗ್ರೆಸ್ ಪಕ್ಷವನ್ನು ಬಲವರ್ಧನೆಗೊಳಿಸಲು ಮುಖಂಡರು, ಕಾರ್ಯಕರ್ತರು ಮುಂದಾಗಿ: ಶಾಸಕ ಕೆ.ಎಂ.ಉದಯ್

ಕಾಂಗ್ರೆಸ್ ಪಕ್ಷವನ್ನು ಬಲವರ್ಧನೆಗೊಳಿಸಲು ಮುಖಂಡರು, ಕಾರ್ಯಕರ್ತರು ಮುಂದಾಗಿ: ಶಾಸಕ ಕೆ.ಎಂ.ಉದಯ್

ಮದ್ದೂರು: ತಾಲೂಕು ಮತ್ತು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲವರ್ಧನೆಗೊಳಿಸಲು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಮುಂದಾಗಬೇಕು ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ಪಟ್ಟಣದಲ್ಲಿ  ಪುರಸಭಾ ಮಾಜಿ ಸದಸ್ಯ ಡಾಬಾ ಮಹೇಶ್ ಸೇರಿದಂತೆ 100 ಕ್ಕೂ ಹೆಚ್ಚು ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದರು.

ಶ್ರೀಘ್ರವಾಗಿ ಲೋಕಸಭಾ ಚುನಾವಣೆ ಬರುತ್ತಿರುವುದರಿಂದ ಈಗಿನಿಂದಲೇ ಪಕ್ಷವನ್ನು ಮತ್ತಷ್ಟು ಬಲಿಷ್ಟಗೊಳಿಸುವ ಮೂಲಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಧಿಕ ಮತಗಳ ಅಂತರದಿಂದ ಗೆಲ್ಲುವಂತೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.

ಸುಮಾರು 15 ವರ್ಷಗಳ ನಂತರ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಸಿಕ್ಕಿದೆ ಇದಕ್ಕೆ ಕ್ಷೇತ್ರದ ಮತದಾರರು ಹಾಗೂ ಯುವ ಶಕ್ತಿಯೇ ಪ್ರಮುಖ ಕಾರಣವಾಗಿದ್ದು, ನಿಮ್ಮಗಳ ಆಶೋತ್ತರಕ್ಕೆ ತಕ್ಕಂತೆ ನಾನು ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನ ಮೇಲಿನ ವಿಶ್ವಾಸದಿಂದ ತಾಲೂಕಿನ ಅಭಿವೃದ್ಧಿಗೆ 200 ಕೋಟಿ ವಿಶೇಷ ಅನುದಾನ ನೀಡಿದ್ದಾರೆ. ಮುಂದಿನ ದಿನಗಳಲ್ಲೂ ಅಭಿವೃದ್ಧಿಗೆ ವಿಶೇಷ ಅನುದಾನ ಕೊಡುವ ಬಗ್ಗೆ ಭರವಸೆ ನೀಡಿದ್ದಾರೆ ಎಂದರು.

ಪಟ್ಟಣದಲ್ಲಿ ಹಾದು ಹೋಗಿರುವ ಕೆಮ್ಮಣ್ಣುನಾಲೆಯನ್ನು 90 ಕೋಟಿ ರೂ. ವೆಚ್ಚದಲ್ಲಿ ಆಧುನಿಕರಣ ಮಾಡಲಾಗುವುದು. ಸಾರ್ವಜನಿಕರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಪಟ್ಟಣದ ವ್ಯಾಪ್ತಿಯಲ್ಲಿ ಜಾರಿಯಲ್ಲಿರುವ ಬಿಎಂಐಸಿಪಿ ಯೋಜನೆಯನ್ನು ಕೈ ಬಿಡುವಂತೆ ಸರ್ಕಾರದ ಗಮನಕ್ಕೆ ತರಲಾಗಿದ್ದು, ಪಟ್ಟಣ ಸೇರಿದಂತೆ ತಾಲೂಕಿನ ಸಮಗ್ರ ಅಭಿವೃದ್ಧಿ ಮಾಡುವುದೇ ನನ್ನ ಪ್ರಮುಖ ಗುರಿಯಾಗಿದೆ ಎಂದರು.

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಸಿ.ಜೋಗಿಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ಪುರಸಭಾ ಸದಸ್ಯರಾದ ಸಚಿನ್, ಸಿದ್ದರಾಜು,  ಚುಂಚಶ್ರಿ ಗೆಳೆಯರ ಬಳಗದ ಅಧ್ಯಕ್ಷ ಪ್ರೊ.ಕೃಷ್ಣೇಗೌಡ, ಮುಖಂಡರಾದ ಎಂ.ಡಿ.ಮಹಾಲಿಂಗಯ್ಯ, ಅರುಣ್ಕುಮಾರ್, ಇಂತಿಯಾಜ್, ಗೊರವನಹಳ್ಳಿ ಮಧು ಸೇರಿದಂತೆ ಇತರರು ಇದ್ದರು.

RELATED ARTICLES
- Advertisment -
Google search engine

Most Popular