Monday, April 21, 2025
Google search engine

HomeUncategorizedರಾಷ್ಟ್ರೀಯಮಿಜೋರಾಂನ ಲೆಂಗ್‌ ಪುಯಿ ವಿಮಾನ ನಿಲ್ದಾಣದಲ್ಲಿ ಮ್ಯಾನ್ಮಾರ್ ಸೇನಾ ವಿಮಾನ ಪತನ

ಮಿಜೋರಾಂನ ಲೆಂಗ್‌ ಪುಯಿ ವಿಮಾನ ನಿಲ್ದಾಣದಲ್ಲಿ ಮ್ಯಾನ್ಮಾರ್ ಸೇನಾ ವಿಮಾನ ಪತನ

ಮಿಜೋರಾಂ: ಮಿಜೋರಾಂನ ಲೆಂಗ್‌ ಪುಯಿ ವಿಮಾನ ನಿಲ್ದಾಣದಲ್ಲಿ ಮ್ಯಾನ್ಮಾರ್ ಸೇನಾ ವಿಮಾನ ಲ್ಯಾಂಡಿಂಗ್ ವೇಳೆ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಿಜೋರಾಂ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಪ್ರಕಾರ, ಬರ್ಮಾ ಸೇನೆಯ ವಿಮಾನ ಅಪಘಾತದಲ್ಲಿ ಕನಿಷ್ಠ ಆರು ಜನರು ಗಾಯಗೊಂಡಿದ್ದಾರೆ.

ಪೈಲಟ್‌ ನೊಂದಿಗೆ ಒಟ್ಟು 14 ಮಂದಿ ವಿಮಾನದಲ್ಲಿದ್ದರು, ಆರು ಮಂದಿ ಗಾಯಗೊಂಡಿದ್ದಾರೆ, ಎಂಟು ಮಂದಿ ಸುರಕ್ಷಿತವಾಗಿದ್ದಾರೆ ಎಂದು ಮಿಜೋರಾಂ ಡಿಜಿಪಿ ತಿಳಿಸಿದ್ದಾರೆ.

ಎಲ್ಲಾ ಗಾಯಾಳುಗಳನ್ನು ಲೆಂಗ್‌ ಪುಯಿ ಆಸ್ಪತ್ರೆಗೆ ದಾಖಲಿಸಲಾಗಿದೆ.

RELATED ARTICLES
- Advertisment -
Google search engine

Most Popular