Sunday, April 20, 2025
Google search engine

Homeರಾಜ್ಯಬಿಯರ್ ದರ ಹೆಚ್ಚಳ ಸಾಧ್ಯತೆ

ಬಿಯರ್ ದರ ಹೆಚ್ಚಳ ಸಾಧ್ಯತೆ

ಬೆಂಗಳೂರು: ರಾಜ್ಯ ಸರ್ಕಾರ ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್ ನೀಡಿದ್ದು, ಬಜೆಟ್‌ಗೂ ಮುನ್ನವೇ ಬಿಯರ್ ದರವನ್ನು ಶೇ.೧೦ರಷ್ಟು ಹೆಚ್ಚಿಸಲು ಮುಂದಾಗಿದೆ. ಅಬಕಾರಿ ಇಲಾಖೆಯ ಮಾಹಿತಿ ಪ್ರಕಾರ, ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆ(ಎಇಡಿ)ಯನ್ನು ಶೇಕಡ ೧೦ ರಷ್ಟು ಹೆಚ್ಚಿಸಲು ಸರ್ಕಾರ ಮುಂದಾಗಿದೆ. ೬೫೦ ಎಂಎಲ್ ಬಿಯರ್ ಬಾಟಲಿಗೆ ೮ ರಿಂದ ೧೦ ರೂಪಾಯಿ ವರೆಗೆ ಹೆಚ್ಚಳವಾಗಲಿದೆ. ಬಿಯರ್ ಮೇಲಿನ ಅಬಕಾರಿ ತೆರಿಗೆಯನ್ನು ಹೆಚ್ಚಿಸಿದರೆ ಗ್ರಾಹಕರ ಜೇಬಿಗೆ ಹೊರೆ ಬೀಳಲಿದೆ.

ಈ ಸಂಬಂಧ ರಾಜ್ಯ ಸರ್ಕಾರ ಜನವರಿ ೨೦, ೨೦೨೪ ರಂದು ಅಧಿಸೂಚನೆ ಹೊರಡಿಸಿದ್ದು, ಹೆಚ್ಚುವರಿ ಅಬಕಾರಿ ತೆರಿಗೆ ಏರಿಕೆಗೆ ಅವಕಾಶ ಕಲ್ಪಿಸುವ ಕರಡು ನಿಯಮಗಳಿಗೆ ಆಕ್ಷೇಪಣೆ ಸಲ್ಲಿಸಲು ಶನಿವಾರದಿಂದ ಏಳು ದಿನಗಳ ಕಾಲಾವಕಾಶ ನೀಡಲಾಗಿದೆ. ಆಸಕ್ತರು ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರಿಗೆ ಮನವಿ ಸಲ್ಲಿಸಲು ಅವಕಾಶವಿದೆ.
ರಾಜ್ಯ ಸರ್ಕಾರ ಜನವರಿ ಕೊನೆಯ ವಾರ ಅಥವಾ ಫೆಬ್ರುವರಿ ಮೊದಲ ವಾರ ಹೊಸ ನಿಯಮಗಳನ್ನು ಜಾರಿಗೊಳಿಸುವ ಸಾಧ್ಯತೆ ಇದೆ.

ಬಿಯರ್ ದರದಲ್ಲಿ ಸಂಭವನೀಯ ಹೆಚ್ಚಳದ ಬಗ್ಗೆ ಪ್ರತಿಕ್ರಿಯಿಸಿದ ಅಬಕಾರಿ ಸಚಿವ ಆರ್‌ಬಿ ತಿಮ್ಮಾಪುರ ಅವರು,”ನಾನು ಈ ಬಗ್ಗೆ ತಕ್ಷಣ ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ಇದು (ಬಿಯರ್ ದರವನ್ನು ಹೆಚ್ಚಿಸುವ ನಿರ್ಧಾರದ ಬಗ್ಗೆ) ಚರ್ಚೆಯಲ್ಲಿದೆ. ಬಜೆಟ್ ಇರುವುದರಿಂದ, ನಾನು ಏನನ್ನೂ ಹೇಳಲಾರೆ ಎಂದಿದ್ದಾರೆ.

RELATED ARTICLES
- Advertisment -
Google search engine

Most Popular