Tuesday, April 22, 2025
Google search engine

Homeರಾಜ್ಯಸುದ್ದಿಜಾಲಜ.26 ರಿಂದ ಫೆ.23 ರವರೆಗೆ ಸಂವಿಧಾನ ಜಾಗೃತಿ ಜಾಥಾ ಸಂಚಾರ: ಯಶಸ್ವಿಗೆ ಸಹಕರಿಸಿ

ಜ.26 ರಿಂದ ಫೆ.23 ರವರೆಗೆ ಸಂವಿಧಾನ ಜಾಗೃತಿ ಜಾಥಾ ಸಂಚಾರ: ಯಶಸ್ವಿಗೆ ಸಹಕರಿಸಿ

ಬಳ್ಳಾರಿ: ಸಂವಿಧಾನದ ಆಶಯಗಳನ್ನು ಜನಸಾಮಾನ್ಯರಿಗೆ ತಿಳಿಸುವ ಮೂಲ ಉದ್ದೇಶದಿಂದ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆಯು ಜಿಲ್ಲೆಯಲ್ಲಿ ಜ.26 ರಿಂದ ಫೆ.23 ರವರೆಗೆ ನಡೆಯಲಿದೆ ಇದರ ಯಶಸ್ವಿಗೆ ಎಲ್ಲರೂ ಸಹಕರಿಸುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದರು. ಅವರು,ವರ್ಚುವಲ್ ಮೂಲಕ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜ.26 ರಂದು ಜಿಲ್ಲಾ ಉಸ್ತುವಾರಿ ಸಚಿವರು ವಿಮ್ಸ್ ಮೈದಾನದಲ್ಲಿ ಸಂವಿಧಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.

ಜಿಲ್ಲೆಯಲ್ಲಿನ ಒಟ್ಟು 100 ಗ್ರಾಮ ಪಂಚಾಯತಿ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಸಂಚಾರ ಮಾರ್ಗ ನಕ್ಷೆ ತಯಾರಿಸಿ, ಮೆರವಣಿಗೆಯ ರಚನೆ ಸಂಯೋಜನೆ, ಮಾರ್ಗ, ತಂಗುವಿಕೆ ಮತ್ತು ವಸತಿ, ಸುರಕ್ಷತೆ ಇತ್ಯಾದಿಗಳನ್ನು ಸಿದ್ದಪಡಿಸಲಾಗಿದೆ. ನಿಗದಿತ ದಿನಾಂಕ, ಸಮಯದೊಳಗೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತಿ, ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಜಾಥವು ತೆರಳುವಾಗ ಸಂಬಂಧಪಟ್ಟ ತಾಲ್ಲೂಕಿನ ತಹಶೀಲ್ದಾರರು ಹಾಗೂ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತಿ ಹಾಗೂ ಗ್ರಾಮ ಪಂಚಾಯತಿ ಅಧಿಕಾರಿಗಳು ಸಂವಿಧಾನ ಜಾಗೃತಿ ಜಾಥವು ಯಶಸ್ವಿಯಾಗಿ ಸಂಚರಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಭಾರತದ ಸಂವಿಧಾನಕ್ಕೆ ಸಂಬಂಧಿಸಿದಂತೆ, ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿನ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆಯನ್ನು ಆಯೋಜಿಸಿ, ಸಂವಿಧಾನ ಜಾಥವು ತಾಲ್ಲೂಕಿಗೆ ಪ್ರವೇಶಿಸಿದಾಗ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಿ, ವಿದ್ಯಾರ್ಥಿಗಳನ್ನು ಜಾಥಾದಲ್ಲಿ ಪಾಲ್ಗೊಳ್ಳುವಂತೆ ಕ್ರಮವಹಿಸಬೇಕು ಎಂದರು.


ಸ್ತಬ್ದ ಚಿತ್ರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ, ಸಂವಿಧಾನದ ಪೀಠಿಕೆ, ಪರಿಕಲ್ಪನೆ, ಪ್ರಮುಖ ವ್ಯಕ್ತಿಗಳ ಮಾಹಿತಿ, ಸಾಹಿತ್ಯ, ಕಲೆ, ಸಂಸ್ಕøತಿ ಮತ್ತು ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ಸ್ಥಬ್ದ ಚಿತ್ರದಲ್ಲಿ ಅಳವಡಿಸಲಾಗುವುದು ಎಂದು ತಿಳಿಸಿದರು.
ಸ್ತಬ್ದ ಚಿತ್ರಗಳ ನಿರ್ಮಾಣಕ್ಕೆ ಈಗಾಗಲೇ ಕ್ರಮವಹಿಸಲಾಗಿದ್ದು, ಸಂವಿಧಾನ ಜಾಗೃತಿ ಜಾಥಾವನ್ನು ಜಿಲ್ಲೆಯಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಸಿ ಯಶಸ್ವಿಗೊಳಿಸಲು ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಂವಿಧಾನದ ಆಶಯಗಳನ್ನು ತಿಳಿದುಕೊಳ್ಳುವಂತೆ ಅವರು ಕೋರಿದರು.
ಈ ಸಂದರ್ಭದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

RELATED ARTICLES
- Advertisment -
Google search engine

Most Popular