ಮಡಿಕೇರಿ : ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ, ೨೫ ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಮುಖ್ಯಮಂತ್ರಿ ಅವರು ನಾಳೆ ಜ. ೨೫ ರಂದು ಬೆಳಗ್ಗೆ ೧೦ ಗಂಟೆಗೆ ವಿರಾಜಪೇಟೆ ತಾಲ್ಲೂಕಿನ ಕೂರ್ಗ್ ಗಾಲ್ಫ್ ಲಿಂಕ್ಸ್ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. ಬಳಿಕ ಬೆಳಗ್ಗೆ ೧೦.೨೦ ಗಂಟೆಗೆ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರ ನಿವಾಸಕ್ಕೆ ಭೇಟಿ ನೀಡಲಿದ್ದಾರೆ.
ನಂತರ ಬೆಳಗ್ಗೆ ೧೦.೩೦ ಗಂಟೆಗೆ ವಿರಾಜಪೇಟೆಯಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ ೨.೩೦ ಗಂಟೆಗೆ ಮಡಿಕೇರಿ ನಗರದ ನೂತನ ಆರಕ್ಷಕ ಅಧೀಕ್ಷಕರ ಕಚೇರಿ ಕಟ್ಟಡ ಉದ್ಘಾಟನೆ ಹಾಗೂ ಜಿಲ್ಲೆಯ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಸಾರ್ವಜನಿಕ ಸಭೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಅವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಅಪರ ಕಾರ್ಯದರ್ಶಿ ಕೆ.ಚಿರಂಜೀವಿ ಅವರು ತಿಳಿಸಿದ್ದಾರೆ.