ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದಿಂದ ನಾನು ಸ್ಪರ್ಧೆ ಮಾಡಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ತುಮಕೂರಿನಿಂದ ನಾನು ಸ್ಪರ್ಧೆ ಮಾಡುತ್ತೇನೆ ಅನ್ನೋದು ಕೇವಲ ಊಹಾಪೋಹ. ನಾನು ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಆರ್‌ಎಸ್ ಎಸ್ ಮುಖಂಡರು ಕ್ಲಾಸ್ ತೆಗೆದುಕೊಂಡ ವಿಚಾರಕ್ಕೆ ಪ್ರತಿಕ್ರಿಯಸಲು ಶೋಭಾ ಕರಂದ್ಲಾಜೆ ನಿರಾಕರಿಸಿದರು.