Monday, April 21, 2025
Google search engine

Homeರಾಜಕೀಯಮಮತಾ ಬಿಜೆಪಿ ಜೊತೆ ಕೈ ಜೋಡಣೆ : ಕಾಂಗ್ರೆಸ್ ನಾಯಕಿ ದೀಪಾ ದಾಸ್ ಟೀಕೆ

ಮಮತಾ ಬಿಜೆಪಿ ಜೊತೆ ಕೈ ಜೋಡಣೆ : ಕಾಂಗ್ರೆಸ್ ನಾಯಕಿ ದೀಪಾ ದಾಸ್ ಟೀಕೆ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವು (ಟಿಎಂಸಿ) ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಘೋಷಿಸಿರುವ ಬಗ್ಗೆ ಕಾಂಗ್ರೆಸ್ ನಾಯಕಿ ದೀಪಾ ದಾಸ್ ಮುನ್ಶಿ ಪ್ರತಿಕ್ರಿಯೆ ನೀಡಿದ್ದು, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪರೋಕ್ಷವಾಗಿ ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ. ಇದರ ಬಗ್ಗೆ ನಮಗೆ ಈಗಾಗಲೇ ಮಾಹಿತಿ ಬಂದಿದೆ’ ಎಂದು ತಿಳಿಸಿದ್ದಾರೆ.

ಮಮತಾ ಬ್ಯಾನರ್ಜಿ ಅವರು ಬಿಜೆಪಿಯವರ ಬಗ್ಗೆ ಮೃದು ಧೋರಣೆ ಹೊಂದಿರುವುದನ್ನು ಸಾಬೀತುಪಡಿಸಿದ್ದಾರೆ. ಅವರು ಇಷ್ಟು ದಿನ ಇಂಡಿಯಾ ಮೈತ್ರಿಕೂಟದಲ್ಲಿದ್ದರು. ಈಗ ತಮ್ಮ ಅಭಿಪ್ರಾಯವನ್ನು ಬದಲಾಯಿಸಿದ್ದು, ಬಿಜೆಪಿಯನ್ನು ಕೈಜೋಡಿಸುತ್ತಿದ್ದಾರೆ. ಬಂಗಾಳದಲ್ಲಿ ಬಿಜೆಪಿಯವರಿಗೆ ಸಹಾಯ ಮಾಡುತ್ತಾರೆ ಎಂದು ಹೇಳಿದ್ದಾರೆ’ ಎಂದು ಹೇಳಿದ್ದಾರೆ.

ಸೀಟು ಹಂಚಿಕೆ ಭಿನ್ನಾಭಿಪ್ರಾಯದ ಮೈತ್ರಿ ಮಾಡಿಕೊಳ್ಳುವುದಿಲ್ಲ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಜೊತೆ ಎಂದು ಮಮತಾ ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ವಿಪಕ್ಷಗಳ ‘ಭಾರತ ಮೈತ್ರಿಕೂಟ’ಕ್ಕೆ ಭಾರಿ ಹಿನ್ನಡೆಯಾಗಿದೆ.

RELATED ARTICLES
- Advertisment -
Google search engine

Most Popular