ಮಂಡ್ಯ: ಇಂದು ನಾಡಿನೆಲ್ಲೆಡೆ 75ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಸಕ್ಕರೆನಾಡು ಮಂಡ್ಯದ ಪೊಲೀಸ್ ಗ್ರೌಂಡ್ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ 75ನೇ ಗಣರಾಜ್ಯೋತ್ಸವ ಆಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ ಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣ ಮಾಡಿ ತೆರೆದ ವಾಹನದಲ್ಲಿ ತುಕಡಿಗಳ ಪರೀವಿಕ್ಷಣೆ ನಡೆಸಿ ಗೌರವ ವಂದನೆ ಸ್ವೀಕರಿಸಿದರು. ಬಳಿಕ ವಿವಿಧ ತುಕಡಿಗಳಿಂದ ಅಕರ್ಷಕ ಪಥಸಂಚಲನ ನಡೆಯಿತು.

ಧ್ವಜಾರೋಹಣದ ಬಳಿಕ ಮಾತನಾಡಿದ ಸಚಿವ ಎನ್.ಚಲುವರಾಯಸ್ವಾಮಿ, ನಮ್ಮದೇ ಆದ ಸಂವಿಧಾನ ಜಾರಿ ಮಾಡಿದ ದಿನ. ನಾವೆಲ್ಲರೂ ಹೆಮ್ಮೆಯಿಂದ ಆಚರಣೆ ಮಾಡುತ್ತಿದ್ದೇವೆ. ನಮ್ಮದೇ ದೇಶ, ನಮ್ಮದೇ ಸಂವಿಧಾನ, ನಮ್ಮದೆ ರಾಜ್ಯ. ಈ ದಿನ ಅತ್ಯಂತ ಸಂಭ್ರಮದ ದಿನ ಎಂದರು.
ಅಂಬೇಡ್ಕರ್ ಅವರ ಸಂವಿಧಾನವನ್ನು ಕೊಟ್ಟಿದ್ದಾರೆ. ಭಾರತಕ್ಕೆ ಅಮೂಲ್ಯವಾದ ಸಂವಿಧಾನ ಸಿಕ್ಕಿದೆ. ಸಂವಿಧಾನ ಜಾರಿಯಾದ ಬಳಿಕ ಗಣರಾಜ್ಯವಾಗಿದೆ. ಪ್ರತಿಯೊಬ್ಬರಿಗೂ ಹಕ್ಕು ಸಿಕ್ಕಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ನಾವೆಲ್ಲರು ಗೌರವ ಸಲ್ಲಿಸಬೇಕು ಎಂದು ಹೇಳಿದರು.
ಎಲ್ಲಾ ಪ್ರಜೆಗಳಿಗೆ ಸಾಮಾಜಿಕ ನ್ಯಾಯ ಸಿಗಬೇಕು. ಸಂವಿಧಾನದ ಮಹತ್ವ ತಿಳಿಸುವ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮ ಮಾಡ್ತಿದೆ. ಫೆ.23 ರಂದು ಎಲ್ಲಾ ಗ್ರಾ.ಪಂ.ಯಲ್ಲಿ ಸಂವಿಧಾನ ಜಾಗೃತಿ ರಥ ಸಂಚಾರ. ಸಂವಿಧಾನದ ಆಶಯದಂತೆ ನಾವು ಬದುಕಬೇಕು ಎಂದು ತಿಳಿಸಿದರು.
ನಮ್ಮ ಸರ್ಕಾರ ಅನೇಕ ಜನಪರ ಯೋಜನೆ ಜಾರಿ ಗೊಳಿಸಿದೆ. ನುಡಿದಂತೆ ನಡೆದ ಹೆಗ್ಗಳಿಕೆ ನಮ್ಮ ಸರ್ಕಾರಕ್ಕಿದೆ ಎಂದ ಅವರು ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ಗಣಿಗ ರವಿಕುಮಾರ್, ಡಿಸಿ ಡಾ.ಕುಮಾರ, ಎಡಿಸಿ ನಾಗರಾಜು, ಎಸ್ಪಿ ಎನ್.ಯತೀಶ್, ಇಸಿಓ, ಸೇರಿದಂತೆ ಹಲವರು ಭಾಗಿಯಾಗಿದ್ದರು.