Saturday, April 19, 2025
Google search engine

Homeರಾಜ್ಯಸುದ್ದಿಜಾಲನೂತನ ಅಧ್ಯಕ್ಷರಾಗಿ ಜನಾರ್ಧನ್, ಕಾರ್ಯದರ್ಶಿಯಾಗಿ ಸ್ವಾಮಿ ಅವಿರೋಧ ಆಯ್ಕೆ

ನೂತನ ಅಧ್ಯಕ್ಷರಾಗಿ ಜನಾರ್ಧನ್, ಕಾರ್ಯದರ್ಶಿಯಾಗಿ ಸ್ವಾಮಿ ಅವಿರೋಧ ಆಯ್ಕೆ

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಜನಾರ್ಧನ್, ಕಾರ್ಯದರ್ಶಿಯಾಗಿ ಸ್ವಾಮಿ ರವರನ್ನು ಅವಿರೋಧ ಆಯ್ಕೆ ಮಾಡಲಾಯಿತು.

ಈ ಹಿಂದೆ ಪ್ರಾಧಿಕಾರದ ನೌಕರರಲ್ಲದವರನ್ನು ಅಧ್ಯಕ್ಷರನ್ನಾಗಿ ಮಾಡಿಕೊಂಡಿದ್ದ ಹಿನ್ನೆಲೆ ಯಾವುದೇ ಸಭೆಗಳಲ್ಲಿ ಬಂದು ಮಾತನಾಡಲು ಸಾಧ್ಯವಾಗುತ್ತಿರಲಿಲ್ಲ, ಕೇವಲ ರಾಜಕೀಯ ಮುಖಂಡರುಗಳು ಹಾಗೂ ಅಧಿಕಾರಿಗಳನಷ್ಟೇ ಭೇಟಿ ಮಾಡಲು ಸಾಧ್ಯವಾಗುತ್ತಿತ್ತು ಇದರಿಂದ ನೌಕರರ ಸಮಸ್ಯೆ ಬಗೆಹರಿಯುತಿರಲಿಲ್ಲ, ಆದ್ದರಿಂದ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಅವರ ನೇತೃತ್ವದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಗೌರವ ಅಧ್ಯಕ್ಷರಾಗಿ ಗೋಪಾಲ್, ಅಧ್ಯಕ್ಷರಾಗಿ ಜನಾರ್ಧನ್, ಕಾರ್ಯದರ್ಶಿಯಾಗಿ ಸ್ವಾಮಿ, ಉಪಾಧ್ಯಕ್ಷರಾಗಿ ಸರಗೂರು ಮಹಾದೇವಸ್ವಾಮಿ, ಸುಮಿತ್ರ ಬಾಯಿ ಸಹ ಕಾರ್ಯದರ್ಶಿಯಾಗಿ ರಾಜು, ಸಂಘಟನಾ ಕಾರ್ಯದರ್ಶಿಯಾಗಿ ಉಮೇಶ್, ಮಹೇಶ್ ಖಜಾಂಚಿಯಾಗಿ ಕಲಾವಿದ ರವಿ, ಜಂಟಿ ಕಾರ್ಯದರ್ಶಿಯಾಗಿ ಮಾದೇಶ್ ಸೇರಿದಂತೆ ಇನ್ನಿತರರನ್ನು ಪದಾಧಿಕಾರಿಗಳನ್ನಾಗಿ ಸರ್ವ ಸದಸ್ಯರ ಸಮ್ಮುಖದಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಮಾತನಾಡಿ ನಾವು ಮುಂದಿನ ಫೆಬ್ರವರಿ ತಿಂಗಳಿನಲ್ಲಿ ಹಮ್ಮಿಕೊಂಡಿರುವ ಗಡಿನಾಡ ಉತ್ಸವ ಕಾರ್ಯಕ್ರಮ ಸಂಬಂಧ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ರವರನ್ನು ಭೇಟಿ ಮಾಡಲು ಆಗಮಿಸಿದ್ದೆವು .ಆದರೆ ಕಾಕತಾಳಿಯ ಎಂಬಂತೆ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ನೌಕರರ ಸಂಘದ ನೂತನ ಪದಾಧಿಕಾರಿಗಳನ್ನು ಸರ್ವ ಸದಸ್ಯರು ಸರ್ವಾನುಮತದಿಂದ ಆಯ್ಕೆ ಮಾಡಿರುವುದು ಸಂತಸ ತಂದಿದೆ ನಾವು ಯಾವುದೇ ಸೌಲಭ್ಯಗಳನ್ನು ಪಡೆಯಬೇಕಾದರೆ ಸಂಘಟನೆ ಅತಿ ಮುಖ್ಯವಾಗಿದೆ.ನಾವು ಯಾವುದೇ ಹೋರಾಟಗಳನ್ನು ಮಾಡಬೇಕಾದರೂ ಸಂಘಟನೆ ಇದ್ದರೆ ಮಾತ್ರ ಯಶಸ್ಸು ಪಡೆಯಬಹುದು ಆದ್ದರಿಂದ ಈಗ ರಚನೆ ಮಾಡಿಕೊಂಡಿರುವ ನೂತನ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಂಘವನ್ನು ಎತ್ತರಕ್ಕೆ ಬೆಳೆಸುವಲ್ಲಿ ಪ್ರತಿಯೊಬ್ಬರು ಶ್ರಮಿಸಬೇಕು, ನಾವು ಎಲ್ಲರೂ ಒಗ್ಗಟ್ಟಾಗಿ ಎಲ್ಲವನ್ನು ಎದುರಿಸಿದರೆ ಏನನ್ನು ಬೇಕಾದರೂ ಪಡೆದುಕೊಳ್ಳಬಹುದು ಎಂದು ಸಲಹೆ ನೀಡಿದರು.

ಕಾರ್ಯದರ್ಶಿ ಸರಸ್ವತಿ ಮಾತನಾಡಿ ನೂತನವಾಗಿ ರಚನೆ ಮಾಡಿಕೊಂಡಿರುವ ಸಂಘ ಉತ್ತಮವಾಗಿ ಕಾರ್ಯನಿರ್ವಹಿಸಿ ನೌಕರರ ಹಿತ ಕಾಪಾಡಲಿ, ನೌಕರರ ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಭೇಟಿ ಮಾಡಿ ಸಮಸ್ಯೆಯನ್ನು ಬಗೆಹರಿಸಲು ನಾನು ಸಹ ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ ಎಂದು ತಿಳಿಸಿದರು .

ಜಿಲ್ಲಾ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಮಹದೇವಸ್ವಾಮಿ, ಕ್ರೀಡಾ ಕಾರ್ಯದರ್ಶಿಗಳಾದ ರಕ್ಷಿತ್ ಕುಮಾರ್, ಉಪಾಧ್ಯಕ್ಷರಾದ ಮಲ್ಲಿಕಾರ್ಜುನ , ಹನೂರು ತಾಲೂಕು ಅಧ್ಯಕ್ಷರಾದ ಗುರುಸ್ವಾಮಿ, ಪ್ರಭಾರ ಕಾರ್ಯದರ್ಶಿಗಳಾದ ಚಂದ್ರಶೇಖರ್, ಜಿಲ್ಲಾ ಸರ್ಕಾರಿ ನೌಕರರ ಸಂಘಟನಾ ಕಾರ್ಯದರ್ಶಿ ವೆಂಕಟೇಶ್, ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರಾದ ಅಶೋಕ್ ಸೇರಿದಂತೆ ಸಂಘದ ಪದಾಧಿಕಾರಿಗಳಾದ ಶ್ರೀನಿವಾಸ ನಾಯ್ಡು, ಪ್ರೀತಮ್ ಇನ್ನಿತರರು ಹಾಜರಿದ್ದರು.

RELATED ARTICLES
- Advertisment -
Google search engine

Most Popular