ಶಿವಮೊಗ್ಗ: ವಿಜಯೇಂದ್ರ ಪಕ್ಷದ ಅಧ್ಯಕ್ಷರಾದ ಮೇಲೆ ಬಿಜೆಪಿ ಪರ ಅಲೆ ಎದ್ದಿದೆ. ಪಕ್ಷ ಬಿಟ್ಟು ಹೋದವರು ವಾಪಾಸು ಬರುತ್ತಿದ್ದಾರೆ. ಅವರ ಜೊತೆ ಹೊಸಬರು ಸಹ ಬರುತ್ತಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿ ಬಂದಿದ್ದೇನೆ. ವಿಜಯೇಂದ್ರ ರಾಜ್ಯಾಧ್ಯಕ್ಷರಾದ ಮೇಲೆ ನಡೆದ ಮೊದಲ ಕಾರ್ಯಕಾರಣಿ ಸಭೆಯಲ್ಲಿ ಸಾವಿರಕ್ಕೂ ಹೆಚ್ಚು ಮುಖಂಡರು ಸೇರಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸೀಟ್ ಗೆಲ್ಲಲು ಏನು ಮಾಡಬೇಕು. ಅದು ಚೆರ್ಚೆ ಆಗುತ್ತದೆ ಎಂದರು.
ರಾಜ್ಯದಲ್ಲಿ ತುಂಬಾ ಒಳ್ಳೆಯ ವಾತಾವರಣವಿದೆ. ನನ್ನ ಪ್ರಕಾರ 28ಕ್ಕೆ 28 ಸ್ಥಾನ ಗೆದ್ದರೂ ಆಶ್ಚರ್ಯವಿಲ್ಲ. ಆ ರೀತಿಯ ವಾತಾವರಣ ದಿನೇ ದಿನೇ ಮೋದಿ ಪರ, ಬಿಜೆಪಿ ಪರವಿದೆ. ನಿಶ್ಚಿತವಾಗಿ ಕಳೆದ ಬಾರಿಗಿಂತ ಹೆಚ್ಚಿನ ಸೀಟು ಗೆಲ್ಲುತ್ತೇವೆ ಎಂದು ಯಡಿಯೂರಪ್ಪ ಹೇಳಿದರು.