Sunday, April 20, 2025
Google search engine

Homeರಾಜ್ಯಕೆ ಎಡತೊರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ, ಶಾಲಾ ವಾರ್ಷಿಕೋತ್ಸವ

ಕೆ ಎಡತೊರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ, ಶಾಲಾ ವಾರ್ಷಿಕೋತ್ಸವ

ಎಡತೊರೆ ಮಹೇಶ್

ಎಚ್ ಡಿ ಕೋಟೆ:  ಕೆ ಎಡತೊರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75 ಗಣರಾಜ್ಯೋತ್ಸವ ಮತ್ತು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು

ಕಾರ್ಯಕ್ರಮವನ್ನು ದೀಪ ಬೆಳಗುವುದರ ಮುಖಾಂತರ  ಉದ್ಘಾಟಿಸಿ ಮಾತನಾಡಿದ ಅಣ್ಣೂರು ಗ್ರಾಮ ಪಂಚಾಯಿತಿ  ಪಿಡಿಓ  ಸಂತೋಷ್ ನಾಗ,  ನಮ್ಮ ಸರ್ಕಾರಿ ಶಾಲೆಯಲ್ಲಿ ನಡೆಯುತ್ತಿರುವ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ನಾನು ಪಾಲ್ಗೊಂಡಿರುವುದು ಸಂತಸ ತಂದಿದೆ. ಇತ್ತೀಚಿನ ದಿನಗಳಲ್ಲಿ ಉತ್ತಮ ಗುಣಮಟ್ಟ ಶಿಕ್ಷಣ ಬೇಕು ಎನ್ನುವ ಕಾರಣಕ್ಕೆ ಖಾಸಗಿ  ಶಾಲೆಗಳ ಮೊರೆ ಹೋಗುತ್ತಿರುವುದು ದೂರದೃಷ್ಟಕರ.  ನಮ್ಮ ಪೋಷಕರು ಅರ್ಥ ಮಾಡಿಕೊಳ್ಳಬೇಕು. ನಮ್ಮ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟ ಶಿಕ್ಷಣ ದೊರೆಯುತ್ತಿದ್ದು, ಕ್ರೀಡೆಗಳು ಸಾಂಸ್ಕೃತಿಕ ಕಾರ್ಯಕ್ರಮ  ಬಿಸಿಊಟ ಸಮವಸ್ತ್ರ ಶಿಕ್ಷಕರು ಮತ್ತು ಶಿಕ್ಷಕಿಯರಿಂದ ಉತ್ತಮ ಶಿಕ್ಷಣಕ್ಕೆ ಸರಕಾರ ಒತ್ತು ನೀಡುತ್ತಿದೆ ಸರಕಾರಿ ಶಾಲೆಯಲ್ಲಿ ಓದಿರುವ ಎಷ್ಟೋ ಜನ ಸರ್ಕಾರಿ ಸೇವೆಯಲ್ಲಿ ಮತ್ತು ದೇಶ ಕಾಯುವ ಸೇವೆಯಲ್ಲಿ ಇರುವುದು  ನಾವು ಕಾಣುತ್ತಿದ್ದೇವೆ. ಇಂಥ ಸನ್ನಿವೇಶದಲ್ಲಿ ಖಾಸಗಿ ಶಾಲೆಗಳ ಮೊರೆ ಹೋಗದೆ,  ನಮ್ಮ ಸರಕಾರಿ ಶಾಲೆಗಳನ್ನು ಪ್ರೋತ್ಸಾಹಿಸಬೇಕೆಂದು ಪೋಷಕರಲ್ಲಿ ಮನವಿ ಮಾಡಿದರು

ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಬೆಳಗ್ಗೆಯಿಂದ ಸಂಜೆವರೆಗೂ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಮಹೇಂದ್ರ ಗ್ರಾಮ ಪಂಚಾಯಿತಿ ಅಧ್ಯಕ್ಷರು ಗ್ರಾಮ ಪಂಚಾಯತಿ ಸದಸ್ಯರು,  ಎಸ್ ಡಿ ಎಂ ಸಿ ಸದಸ್ಯರು,  ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ  ಸದಸ್ಯರು ಶಾಲೆಯ ಶಿಕ್ಷಕರು ಸೇರಿದಂತೆ ಪೋಷಕರು ಊರಿನ ಯಜಮಾನರು, ಗ್ರಾಮದ ಯುವ ಮುಖಂಡರು, ವಿದ್ಯಾರ್ಥಿಗಳು ಪೋಷಕರು ಭಾಗವಹಿಸಿದ್ದರು.

 ಇದೇ ಸಂದರ್ಭದಲ್ಲಿ ಗ್ರಾಮಸ್ಥರು ಶಿಕ್ಷಕರಿಗೆ ಮತ್ತು ಶಿಕ್ಷಕಿಯರಿಗೆ ಸನ್ಮಾನಿಸಿ ಹೂವಿನ ಸುರಿಮಳೆ ಗೈದರು.

RELATED ARTICLES
- Advertisment -
Google search engine

Most Popular