ಧಾರವಾಡ: ಇಂದು ಬೆಳಗ್ಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಧಾರವಾಡ ಜಿಲ್ಲಾಡಳಿತ ಆಯೋಜಿಸಿದ್ದ ಜಿಲ್ಲಾ ಮಟ್ಟದ 4ನೇ ಜನತಾದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ 111 ಅಹವಾಲುಗಳನ್ನು ಸ್ವೀಕರಿಸಲಾಯಿತು.
ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಜನತಾ ದರ್ಶನದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾರ್ವಜನಿಕರ ಅಹವಾಲುಗಳನ್ನು ರೂಪಿಸಿ, ಸಮಾಲೋಚಿಸಿ ತ್ವರಿತವಾಗಿ ಪರಿಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಸಾರ್ವಜನಿಕರು ಜನತಾದರ್ಶನದಲ್ಲಿ ಸಚಿವರಿಗೆ ಸುಮಾರು 111 ಅಹವಾಲುಗಳನ್ನು ಸಲ್ಲಿಸಿದರು.

ಜಿಲ್ಲಾಧಿಕಾರಿ ದಿವ್ಯಾ ಪ್ರಭು, ಮಹಾನಗರ ಪೊಲೀಸ್ ಆಯುಕ್ತ ರೇಣುಕಾ ಸುಕುಮಾರ, ಜಿಲ್ಲಾ ಪೊಲೀಸ್ ಹಿರಿಯ ಅಧಿಕಾರಿ ಡಾ.ಗೋಪಾಲ ಬ್ಯಾಕೋಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವರೂಪ ಟಿ.ಕೆ.ಡಾ.ಮಹಾನಗರ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ವೇದಿಕೆಯಲ್ಲಿದ್ದರು. ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ನಿಗಮ ಮಂಡಳಿಯ ಜಿಲ್ಲಾ ವ್ಯವಸ್ಥಾಪಕರು, ತಹಸೀಲ್ದಾರ್ ಸೇರಿದಂತೆ ಇತರೆ ಅಧಿಕಾರಿಗಳು ಭಾಗವಹಿಸಿದ್ದರು.
ಇಲಾಖೆ ಸಲ್ಲಿಸಿರುವ ವರದಿಗಳ ವಿವರ: ಈ ಪೈಕಿ ಹೆಸ್ಕಾಂ 02, ಗೃಹ ಇಲಾಖೆ 03, ಅರಣ್ಯ ಇಲಾಖೆ 01, ಸಮಾಜ ಕಲ್ಯಾಣ ಇಲಾಖೆ 02, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 05, ಕಾರ್ಮಿಕ ಇಲಾಖೆ 12, ಶಾಲಾ ಶಿಕ್ಷಣ ಇಲಾಖೆ 04, ಆರೋಗ್ಯ ಇಲಾಖೆ 03, ಸಾರಿಗೆ ಇಲಾಖೆ 01, ಮಹಿಳಾ ಮತ್ತು ಮಕ್ಕಜಲ ಅಭಿವೃದ್ಧಿ ಇಲಾಖೆ 02, ಕಂದಾಯ ಇಲಾಖೆ 26, ಹುಬ್ಬಳ್ಳಿ-ಧಾರವಾಡ ನಗರಸಭೆ 31 ಸಚಿವರು ರಾಜ್ ಇಲಾಖೆ 17 ಸೇರಿ ಒಟ್ಟು 111 ಅಹವಾಲು ಸ್ವೀಕರಿಸಿದ್ದಾರೆ. ಅಹವಾಲುಗಳನ್ನು ಪರಿಶೀಲಿಸಿ ಕಾಲಮಿತಿಯೊಳಗೆ ಪರಿಹರಿಸುವಂತೆ ಸಚಿವರು ಸೂಚನೆ ನೀಡಿದರು.
