Monday, April 21, 2025
Google search engine

Homeರಾಜ್ಯದೇವರ ಮುಂದೆ ಹಚ್ಚಿಟ್ಟಿದ್ದ ದೀಪದಿಂದ ಮನೆಗೆ ಬೆಂಕಿ

ದೇವರ ಮುಂದೆ ಹಚ್ಚಿಟ್ಟಿದ್ದ ದೀಪದಿಂದ ಮನೆಗೆ ಬೆಂಕಿ

ದಾವಣಗೆರೆ: ದೇವರ ಮುಂದೆ ಹಚ್ಚಿಟ್ಟಿದ್ದ ದೀಪ ಇಡೀ ಮನೆಯನ್ನೇ ಸುಟ್ಟು ಹಾಕಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ತೋರಣಗಟ್ಟೆ ಗ್ರಾಮದ ಮನೆಯೊಂದರಲ್ಲಿ ನಡೆದಿದೆ.

ನಿನ್ನೆ ರಾತ್ರಿ ಒಂಬತ್ತು ಗಂಟೆ ಸುಮಾರಿಗೆ ದೇವರ ಮುಂದೆ ಹಚ್ಚಿಟ್ಟಿದ್ದ ದೀಪದಿಂದ ಬೆಂಕಿ ತಗುಲಿ ಮನೆಯಲ್ಲಿದ್ದ ವಸ್ತು, ಧಾನ್ಯ, ಹಣ ಭಸ್ಮವಾಗಿದೆ.

ಬಡಪ್ಪ ಎಂಬುವವರು ಮನೆ ಬಾಗಿಲು ಹಾಕಿಕೊಂಡು ತಮ್ಮ ಕುಟುಂಬಸ್ಥರೊಂದಿಗೆ ಕಾರ್ಯಕ್ರಮಕ್ಕೆ ಹೋಗಿದ್ದರು. ಈ ವೇಳೆ ಮನೆಯಲ್ಲಿದ್ದ ದೀಪದಿಂದ ಆಕಸ್ಮಿಕವಾಗಿ ಬೆಂಕಿ ಹಚ್ಚಿಕೊಂಡಿದೆ. ಉರಿಯುತ್ತಿದ್ದ ದೀಪದ ಜ್ವಾಲೆ ಬಟ್ಟೆಗೆ ಹತ್ತಿಕೊಂಡು ಇಡೀ ಮನೆ ಹೊತ್ತಿ ಉರಿದಿದೆ. ಬೆಂಕಿ ಅವಘಡದಲ್ಲಿ ಮನೆಯಲ್ಲಿದ್ದ ಹಣ, ಚಿನ್ನಾಭರಣ, ಬಟ್ಟೆ, ದಾಖಲೆಗಳು ಬೆಂಕಿಗೆ ಅಹುತಿಯಾಗಿದೆ. ಘಟನಾ ಸ್ಥಳಕ್ಕೆ ಜಗಳೂರು ತಾಲೂಕು ದಂಡಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಗ್ನಿ ಅವಘಡದಿಂದ ಆದ ನಷ್ಟಕ್ಕೆ ಪರಿಹಾರ ನೀಡಲು ಬಡಪ್ಪ ಅವರು ಮನವಿ ಮಾಡಿದ್ದಾರೆ. ಸದ್ಯ ತಾಲೂಕು ದಂಡಧಿಕಾರಿಗಳು ಪರಿಸರ ವಿಕೋಪ ನಿಧಿಯಿಂದ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular