ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ ಸಿರವಾರದಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದಡಿ ಇಬ್ಬರು ಕಾನ್ಸ್‌ಟೇಬಲ್‌ಗಳನ್ನು ಅಮಾನತುಗಳಿಸಿ ರಾಯಚೂರು ಎಸ್‌ಪಿ ಬಿ.ನಿಖಿಲ್ ಆದೇಶಿಸಿದ್ದಾರೆ. ಸಿರವಾರ ಠಾಣೆಯ ಕಾನ್ಸ್‌ಟೇಬಲ್‌ಗಳಾದ ಇಸ್ಮಾಯಿಲ್ ಹಾಗೂ ರೇವಣಸಿದ್ದ ಅವರು ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಕರ್ತವ್ಯಲೋಪ ಹಿನ್ನಲೆ ಅಮಾನತು ಮಾಡಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ೨೪ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸುವ ಭರವಸೆ ಕೊಟ್ಟಿದ್ದರು. ಅದರಂತೆ ಪೊಲೀಸರು ಸ್ಥಳೀಯ ಸಿಸಿ ಟಿವಿ ಫೂಟೇಜ್‌ಗಳ ಪರಿಶೀಲನೆ ನಡೆಸಿದ್ದರು. ಪ್ರಕರಣದ ಸಂಬಂಧ ಮೂವರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸಿರವಾರ ಪಟ್ಟಣದ ನಿವಾಸಿ ಆರೋಪಿ ಆಕಾಶ್ (೨೩) ತಪ್ಪೊಪ್ಪಿಕೊಂಡಿದ್ದಾನೆ. ಬಳಿಕ ಪೊಲೀಸರು ಆಕಾಶ್‌ನ ಹಿನ್ನೆಲೆ, ಕೃತ್ಯ ಎಸಗಿದ್ದರ ಉದ್ದೇಶದ ಬಗ್ಗೆ ಹೇಳಿಕೆ ದಾಖಲಿಸಿಕೊಂಡಿದ್ದರು. ಇದೀಗ ಕರ್ತವ್ಯಲೋಪದಡಿ ಇಬ್ಬರು ಪೊಲೀಸ್ ಪೇದೆಗಳನ್ನು ಅಮಾನತುಗೊಳಿಸಲಾಗಿದೆ.