Tuesday, April 22, 2025
Google search engine

HomeUncategorizedರಾಷ್ಟ್ರೀಯಬಿಜೆಪಿ ಹಿರಿಯ ನಾಯಕ ಎಲ್​.ಕೆ. ಅಡ್ವಾಣಿಗೆ ಭಾರತ ರತ್ನ ಘೋಷಣೆ

ಬಿಜೆಪಿ ಹಿರಿಯ ನಾಯಕ ಎಲ್​.ಕೆ. ಅಡ್ವಾಣಿಗೆ ಭಾರತ ರತ್ನ ಘೋಷಣೆ

ನವದೆಹಲಿ: ಬಿಜೆಪಿ ಹಿರಿಯ ನಾಯಕ ಎಲ್​.ಕೆ. ಅಡ್ವಾಣಿ ಅವರಿಗೆ ಕೇಂದ್ರ ಸರ್ಕಾರದಿಂದ ಭಾರತ ರತ್ನ ಘೋಷಣೆ ಮಾಡಲಾಗಿದೆ.

”ಎಲ್‌.ಕೆ. ಅಡ್ವಾಣಿ ಅವರಿಗೆ ಭಾರತ ರತ್ನ ನೀಡಲಾಗುವುದು ಎಂಬ ವಿಷಯವನ್ನು ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ. ನಾನು ಕೂಡ ಅವರೊಂದಿಗೆ ಮಾತನಾಡಿದ್ದೇನೆ. ಈ ಗೌರವ ಸಂದಿರುವುದಕ್ಕೆ ಅಭಿನಂದಿಸಿದ್ದೇನೆ” ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

’’ಶ್ರೀ ಎಲ್ ಕೆ ಅಡ್ವಾಣಿ ಜಿ ಅವರಿಗೆ ಭಾರತ ರತ್ನ ನೀಡಲಾಗುವುದು ಎಂಬ ವಿಚಾರವನ್ನು ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ. ನಾನು ಕೂಡ ಅವರೊಂದಿಗೆ ಮಾತನಾಡಿ ಈ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದೇನೆ . ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಅಡ್ವಾಣಿ ಜೀ ಅವರು ಒಬ್ಬರು, ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಸ್ಮರಣೀಯವಾಗಿದೆ. ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ನಮ್ಮ ಉಪಪ್ರಧಾನಿಯಾಗಿ ದೇಶ ಸೇವೆ ಮಾಡುವವರೆಗಿನ ಅವರ ಸೇವೆ ಅನನ್ಯವಾದದು. ಅವರು ನಮ್ಮ ಗೃಹ ಮಂತ್ರಿ ಮತ್ತು I&B ಸಚಿವರಾಗಿಯೂ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಅವರ ಸಂಸದೀಯ ನಡೆ ಯಾವಾಗಲೂ ಆದರ್ಶಪ್ರಾಯವಾಗಿವೆ ಹಾಗೂ ಶ್ರೀಮಂತ ಒಳನೋಟಗಳಿಂದ ತುಂಬಿವೆ’’ ಎಂದು ಟ್ವೀಟ್​ ಮಾಡಿ ಗುಣಗಾನ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular