ಭರಮಸಾಗರ: ಕಾರಿನ ಟೈಯರ್ ಒಡೆದು ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ತೀವ್ರ ಗಾಯಗೊಂಡ ಘಟನೆ ರಾ.ಹೆ. 48 ರ ಕೆ.ಬಳ್ಳೇಕಟ್ಟೆ ಬಳಿ ಸಂಭವಿಸಿದೆ.
ಮಹಾರಾಷ್ಟ್ರ ಮೂಲದ ಎರ್ಟಿಗಾ ಕಾರು ಬೆಂಗಳೂರಿಂದ ಕೆ.ಬಳ್ಳೇಕಟ್ಟೆ ಬಳಿ ಸಾಗುವ ವೇಳೆ ಕಾರಿನ ಚಕ್ರ ಒಡೆದು ಕಾರು ಡಿವೈಡರ್ ಗೆ ಡಿಕ್ಕಿಯಾಗಿ ಬಳಿಕ ನಿಯಂತ್ರಣಕ್ಕೆ ಬಾರದೆ ರಸ್ತೆ ಬದಿಯ ಚರಂಡಿಗೆ ಬಿದ್ದಿದೆ.
ಅಪಘಾತದ ಪರಿಣಾಮ ಕಾರಿನಲ್ಲಿದ ಮಹಾರಾಷ್ಟ್ರ ಮೂಲದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊರ್ವ ತೀವ್ರ ಗಾಯಗೊಂಡು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.