Sunday, April 20, 2025
Google search engine

Homeಸ್ಥಳೀಯಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಯಂತ್ರ ಅಳವಡಿಸಲು ಕ್ರಮ: ಡಾ. ಯತೀಂದ್ರ ಸಿದ್ದರಾಮಯ್ಯ

ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಯಂತ್ರ ಅಳವಡಿಸಲು ಕ್ರಮ: ಡಾ. ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು: ರಾಜ್ಯದಲ್ಲಿರುವ ಸರ್ಕಾರಿ ಆಸ್ಪತ್ರೆಗಳಿಗೆ ಡಯಾಲಿಸಿಸ್ ಯಂತ್ರಗಳನ್ನು ಅವಶ್ಯಕತೆಗೆ ತಕ್ಕಂತೆ ಸರಬರಾಜು ಮಾಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ವರುಣಾ ಕ್ಷೇತ್ರದ ಮಾಜಿಶಾಸಕ ಹಾಗೂ ಆಶ್ರಯ ಸಮಿತಿ ಅಧ್ಯಕ್ಷ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ನಂಜನಗೂಡಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಿ.ಎಸ್.ಆರ್ ಫಂಡ್‌ನಿಂದ ಎನ್.ಸಿ.ಸಿ. ಕಡೆಯಿಂದ ಅಳವಡಿಸಿರುವ ೧೬ ಲಕ್ಷದ ೨ ಡಯಾಲಿಸೀಸ್ ಯಂತ್ರಗಳ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿ.

ಆರೋಗ್ಯ ಸಚಿವರಾದ ದಿನೇಶ್ ಗುಂಡುರಾವ್‌ರವರು ಮುಖ್ಯಮಂತ್ರಿಗಳೊಡನೆ ಚರ್ಚೆಮಾಡಿ. ರಾಜ್ಯದ ಎಲ್ಲಾ ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿಯೂ ಅಗತ್ಯಕ್ಕೆ ತಕ್ಕಂತೆ ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಏಕೆಂದರೆ ಖಾಸಗಿ ಆಸ್ಪತ್ರೆಗಳಿಗೆ ಬಡವರು ಹೋಗಿ ಚಿಕಿತ್ಸೆ ಪಡೆಯಲು ಸಾಧ್ಯವಾಗದ ಕಾರಣ ಮುಖ್ಯಮಂತ್ರಿಗಳು ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಯಂತ್ರಗಳನ್ನು ಹಾಗೂ ತಂತ್ರಜ್ಞರನ್ನು ನೀಡಲು ಕ್ರಮ ಕೈಗೊಂಡಿದ್ದಾರೆ. ಈ ಆಸ್ಪತ್ರೆಗೆ ಪ್ರತಿ ದಿನ ೭೦೦ ರಿಂದ ೮೦೦ ಜನ ಹೊರರೋಗಿಗಲು ಬರುತ್ತಾರೆಂದು ವೈದ್ಯರು ತಿಳಿಸಿದ್ದಾರೆ ಹಾಗೂ ಟ್ರಾಮ ಕೇರ್ ಸೆಂಟರ್ ತೆರೆಯಲು ೨ ಎಕರೆ ಜಾಗ ಕೇಳಿದ್ದಾರೆ.

ವೈದ್ಯರು ಬೇಕು, ವಸತಿ ಗೃಹ ದುರಸ್ತಿ ಆಗಬೇಕು ಎಂದಿದ್ದಾರೆ. ಈ ಎಲ್ಲಾ ಸಮಸ್ಯೆಗಳನ್ನು ಶಾಸಕರಾದ ದರ್ಶನ ಧ್ರುವ ನಾರಾಯಣ್ ಹಾಗೂ ನಾನು ಸೇರಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸುತ್ತೇವೆ. ಈ ಡಯಾಲಿಸಿಸ್ ಯಂತ್ರಗಳ ಸದುಪಯೋಗವನ್ನು ರೋಗಿಗಳು ಪಡೆದುಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಡಾ. ಶಿವಪ್ರಕಾಶ್, ಡಾ. ಈಶ್ವರ್, ಜಿ.ಪಂ ಮಾಜಿಸದಸ್ಯ ಕೆ. ಮಾರುತಿ, ಎಪಿಎಂಸಿ ಅಧ್ಯಕ್ಷ ದಕ್ಷಿಣಾಮೂರ್ತಿ, ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಕೆ.ಎನ್.ವಿಜಯ್, ಆಪ್ತಸಹಾಯಕರಾದ ಶಿವಸ್ವಾಮಿ, ಪ್ರದೀಪ್ ಕುಮಾರ್, ನಾಗರಾಜು ಹಾಜರಿದ್ದರು.

RELATED ARTICLES
- Advertisment -
Google search engine

Most Popular