Sunday, April 20, 2025
Google search engine

Homeರಾಜ್ಯಸುದ್ದಿಜಾಲರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹುಮಾನ ವಿತರಣೆ

ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹುಮಾನ ವಿತರಣೆ

ಮಡಿಕೇರಿ : ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪೃಶ್ಯತೆ ನಿವಾರಣೆಗೆ ನಡೆಸಿದ ಪ್ರಯೋಗಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ರಾಷ್ಟ್ರಾಪಿತ ಮಹಾತ್ಮ ಗಾಂಧೀಜಿಯವರ ೧೫೪ ನೇ ಜಯಂತಿ ನಿಮಿತ್ತ ಆಯೋಜಿಸಿದ್ದ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹುಮಾನ ವಿತರಿಸಿದರು.

ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅವರು ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತ ೯ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳು, ಸ್ಮರಣಿಕೆ ಹಾಗೂ ಗಾಂಧೀಜಿ ಅವರ ಜೀವ ಸಂದೇಶಗಳ ಕುರಿತು ಪುಸ್ತಕಗಳನ್ನು ವಿತರಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾತ್ಮ ಗಾಂಧೀಜಿಯವರ ೧೫೪ ನೇ ಜಯಂತಿ ಸಂದರ್ಭದಲ್ಲಿ ವಿದ್ಯಾರ್ಥಿ, ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಜೀವನ-ಸಂದೇಶ ಹಾಗೂ ಅವರು ಸವೆಸಿದ ಹಾದಿ ಹಾಗೂ ಅವರು ಜೀವನದುದ್ದಕ್ಕೂ ಪಾಲಿಸಿಕೊಂಡು ಆದರ್ಶಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ ಒಟ್ಟು ೩ ಪ್ರತ್ಯೇಕ ವಿಭಾಗಗಳಲ್ಲಿ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸುಮಾರು ೧೨ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿರುವುದು ಸಂತಸದ ಸಂಗತಿ ಎಂದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳಕರ್ ಅವರು ಮಾತನಾಡಿ, ಗಾಂಧೀಜಿಯವರ ಜನ್ಮದಿನದ ನಿಮಿತ್ತ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ನನಗೇಕೆ ಗಾಂಧೀಜಿ ಇ?ವಾಗುತ್ತಾರೆ, ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ,ಗಾಂಧೀಜಿಯವರ ತತ್ವಗಳಿಂದ ದೇಶ ಕಟ್ಟುವ ಬಗೆ. ದೇಶದ ಕಳಂಕವಾದ ಅಸ್ಪೃಶ್ಯತೆ ನಿವಾರಿಸುವಲ್ಲಿನ ಗಾಂಧೀಜಿಯವರ ಪ್ರಯೋಗಗಳು. ಗಾಂಧೀಜಿಯವರನ್ನು ಜಗತ್ತು ಗ್ರಹಿಸಿದ ರೀತಿ. ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ. ದೇಶ ನಿರ್ಮಾಣದಲ್ಲಿ ಗಾಂಧೀಜಿಯವರ ಜಾತ್ಯತೀತ ನಿಲುವುಗಳು ಗಾಂಧೀಜಿಯವರ ಧಾರ್ಮಿಕ ಚಿಂತನೆ, ಸ್ವಾತಂತ್ರ್ಯ ಮತ್ತು ಸಮಾನತೆಯ ಪರಿಕಲ್ಪನೆಗಳು. ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ವಿಷಗಳಿಗೆ ಸಂಬಂಧಿಸಿದಂತೆ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿತ್ತು ಎಂದರು.

ಜಿಲ್ಲಾ ಮಟ್ಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಜಿಲ್ಲಾ ಹಂತದಲ್ಲಿಯೇ ಬಹುಮಾನ ವಿತರಿಸಲಾಗಿದೆ. ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ಪ್ರಬಂಧಗಳನ್ನು ರಾಜ್ಯ ಮಟ್ಟದ ಸ್ಪರ್ಧೆಗೆ ಪರಿಗಣಿಸಲಾಗಿತ್ತು ಎಂದರು. ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳ ಪ್ರಬಂಧಗಳನ್ನು ರಾಜ್ಯ ಮಟ್ಟದ ಸ್ಪರ್ಧೆಗೆ ಪರಿಗಣಿಸಲಾಗಿತ್ತು. ಮೂರು ವಿಭಾಗಗಳಲ್ಲಿ ಪ್ರತ್ಯೇಕವಾಗಿ ಪ್ರಥಮ ಸ್ಥಾನ-೩೧,೦೦೦, ದ್ವಿತೀಯ-೨೧,೦೦೦ ಹಾಗೂ ತೃತೀಯ-೧೧,೦೦೦ ರೂ.ಗಳ ನಗದು ಪುರಸ್ಕಾರ ನೀಡಲಾಯಿತು.

RELATED ARTICLES
- Advertisment -
Google search engine

Most Popular