ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ ೭ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದು ಅವರು ಅಂದು ಸಂಜೆ ೪.೪೫ ಗಂಟೆಗೆ ಮೈಸೂರು ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸುವರು. ಸಂಜೆ ೫.೨೦ ಗಂಟೆಗೆ ನಂಜನಗೂಡು ತಾಲೂಕಿನ ಶ್ರೀ ಕ್ಷೇತ್ರ ಸುತ್ತೂರು ನಲ್ಲಿ ಶ್ರೀ ಕ್ಷೇತ್ರ ವೀರ ಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳವರ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸುವರು.
ನಂತರ ಸಂಜೆ ೬.೧೫ ಗಂಟೆಗೆ ಮೈಸೂರು ತಾಲೂಕು ವರುಣ ಹೋಬಳಿಯ ಮಹಾದೇವಿ ಕಾಲೋನಿಯಲ್ಲಿ ಶ್ರೀ ಸಿದ್ದಪ್ಪಾಜಿ ದೇವಸ್ಥಾನ ಹಾಗೂ ಮಾರಮ್ಮ ದೇವಿ ದೇವಸ್ಥಾನ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.ನಂತರ ಅಂದು ರಾತ್ರಿ ೯ ಗಂಟೆಗೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.