ಮಂಗಳೂರು (ದಕ್ಷಿಣ ಕನ್ನಡ): ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಎನ್‌ಐಟಿಕೆಯ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಮುಕ್ಕ ಇಂಡಿಯನ್ ಪೆಟ್ರೋಲ್ ಪಂಪ್ ಬಳಿಯ ಸರ್ವಿಸ್ ರಸ್ತೆಯಲ್ಲಿ ಇಂದು ನಡೆದಿದೆ.
ಎನ್‌ಐಟಿಕೆಯಲ್ಲಿ ಕಲಿಯುತ್ತಿದ್ದ ಮಾನ್ವಿ (17) ಮೃತಪಟ್ಟ ಬಾಲಕಿ ಎಂದು ತಿಳಿದುಬಂದಿದೆ. ತಂದೆ, ಮಗಳು ಸ್ಕೂಟಿಯಲ್ಲಿ ಮುಕ್ಕದ ಮನೆಗೆ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಸುರತ್ಕಲ್ ಠಾಣೆ ಪೊಲೀಸರು ಭೇಟಿ ನೀಡಿದ್ದು, ಲಾರಿ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.