Saturday, April 19, 2025
Google search engine

Homeರಾಜ್ಯಭೇರ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಾಯಕಲ್ಪ ಯೋಜನೆ ಪ್ರಶಸ್ತಿ

ಭೇರ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಾಯಕಲ್ಪ ಯೋಜನೆ ಪ್ರಶಸ್ತಿ

ವರದಿ: ವಿನಯ್ ದೊಡ್ಡಕೊಪ್ಪಲು

ಕೆ.ಆರ್.ನಗರ :  ಖಾಸಗಿ ಆಸ್ಪತ್ರೆಗಿಂತ ಹೆಚ್ಚಿನ ಗುಣಮಟ್ಟದಲ್ಲಿ ರೋಗಿಗಳಿಗೆ ಮೂಲಭೂತ ಸೌಕರ್ಯಗಳನ್ನು ಪೂರೈಸುವುದರ ಜೊತೆಗೆ ಸಮರ್ಪಕ ರೀತಿಯಲ್ಲಿ ಸ್ವಚ್ಛತೆ ಕಾಪಾಡಿಕೊಂಡು, ಗ್ರಾಮೀಣ ಪ್ರದೇಶದಲ್ಲಿ ವೈದ್ಯಕೀಯ ಸೇವೆ ಒದಗಿಸುತ್ತಾ ಬರುತ್ತಿರುವ ಸಾಲಿಗ್ರಾಮ  ತಾಲೂಕಿನ  ಭೇರ್ಯ  ಪ್ರಾಥಮಿಕ ಆರೋಗ್ಯ ಕೇಂದ್ರ ಮೈಸೂರು ಜಿಲ್ಲೆಯಲ್ಲಿ ಮೊದಲ ಸ್ಥಾನದ ಹೆಗ್ಗಳಿಕೆಗೆ ಪಾತ್ರವಾಗಿ ಕಾಯಕಲ್ಪ ಯೋಜನೆಯ ಪ್ರಶಸ್ತಿಗೆ ಭಾಜನವಾಗಿದೆ.

ಅತೀ ಹೆಚ್ಚು ಜನಸಂಖ್ಯೆ: ಭೇರ್ಯ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರವು ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಜನಸಂಖ್ಯೆ ಹಾಗೂ ಅಕ್ಕಪಕ್ಕದ ಗಡಿ ಜಿಲ್ಲೆಯ ಗ್ರಾಮಗಳ ವ್ಯಾಪ್ತಿ ಹೊಂದಿದೆ. ಕೇಂದ್ರದ ವ್ಯಾಪ್ತಿಯಲ್ಲಿ ಸುಮಾರು ೨8 ಸಾವಿರ ಜನಸಂಖ್ಯೆ ಇದ್ದು, ನಿತ್ಯ ನೂರಾರು ಹೊರ ರೋಗಿಗಳು ಸೇರಿದಂತೆ  ಇಷ್ಟೂ ಜನರಿಗೆ ಸಮರ್ಪಕ ವೈದ್ಯಕೀಯ ಸೇವೆಯನ್ನು ಕಲ್ಪಿಸಲು ೫ ಉಪ ಆರೋಗ್ಯ ಕೇಂದ್ರಗಳನ್ನು ತೆರೆಯಲಾಗಿದೆ. ಕೆಲವು ವರ್ಷಗಳ ಕಾಲ ಆರೋಗ್ಯ ಸಿಬ್ಬಂದಿಗಳು ಹಾಗೂ ಖಾಯಂ ವೈದ್ಯರು ಇಲ್ಲದೆ ಸ್ವಚ್ಛತೆ ಮರೀಚಿಕೆಯಾಗಿತ್ತು. ಕಳೆದ ಎರಡು ವರ್ಷಗಳಿಂದ ಆಸ್ಪತ್ರೆಯು ಸ್ವತ್ಛತೆಯಿಂದ ಕೂಡಿ ರೋಗಿಗಳಿಗೆ ಉತ್ತಮ ಆರೋಗ್ಯ ಸೇವೆ ನೀಡಲಾಗುತ್ತಿದೆ.

ರಾಷ್ಟ್ರೀಯ ಮಟ್ಟದಲ್ಲಿ ಕೆ.ಆರ್.ನಗರ ಮತ್ತು ಸಾಲಿಗ್ರಾಮ ಆವಳಿ ತಾಲೂಕಿನಲ್ಲಿ ಬರುವ  ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮಾದರಿ ಮಾಡುವ ಹಂಬಲ ಹೊಂದಿದ್ದೇನೆ, ಮೊದಲ ಆದ್ಯತೆ ಸ್ವಚ್ಚತೆ, ಸುರಕ್ಷಿತೆ, ಶುದ್ದ ಕುಡಿಯುವ ನೀರು, ಅನೇಕ ವೈದ್ಯಕೀಯ ಸೌಲಭ್ಯಗಳನ್ನು ಸೇರಿದಂತೆ ಎಲ್ಲವನ್ನೂ ಸಮರ್ಪಕವಾಗಿ ಒದಗಿಸುವ ನಿಟ್ಟಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೂಚನೆ ನೀಡಿದ್ಸೇನೆ.ಜಿಲ್ಲೆಯಲ್ಲಿ ಕಾಯಕಲ್ಪ ಪ್ರಶಸ್ತಿಗೆ ಭಾಜನವಾಗಿರುವ ಭೇರ್ಯ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಸೇರಿದಂತೆ ಎಲ್ಲರನ್ನು ಅಭಿನಂದಿಸುತ್ತೇನೆ.

  • ಡಾ.ಡಿ.ನಟರಾಜು. ತಾಲೂಕು ಆರೋಗ್ಯಾಧಿಕಾರಿಗಳು. ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲೂಕು.

ಭೇರ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರಾಜ್ಯಮಟ್ಟದ ಕಾಯಕಲ್ಪ ಪ್ರಶಸ್ತಿ ಹಾಗೂ ಎರಡು ಲಕ್ಷ ರೂಪಾಯಿ ನಗದು ಬಹುಮಾನವನ್ನು ನೀಡಿ ಗೌರವಿಸಲಾಯಿತು.

ಮೈಸೂರಿನಲ್ಲಿ ನಡೆದ ರಾಷ್ಟ್ರೀಯ ಆರೋಗ್ಯ ಅಭಿಯಾನ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾಯಕಲ್ಪ ರಾಜ್ಯ ಮಟ್ಟದ ಪ್ರಶಸ್ತಿ ಸಮಾರಂಭದಲ್ಲಿ ಭೇರ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರಾಜ್ಯ ಮಟ್ಟದ ಕಾಯಕಲ್ಪ ಪ್ರಶಸ್ತಿ ದೊರೆತಿದೆ. ಭೇರ್ಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಸೌಜನ್ಯ ಆಸ್ಪತ್ರೆಯ ಸಿಬ್ಬಂದಿಗಳೊಡನೆ  ಪ್ರಶಸ್ತಿಯನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಂದ ಪಡೆದು ಕೊಂಡರು.

RELATED ARTICLES
- Advertisment -
Google search engine

Most Popular