ತಿರುವನಂತಪುರ/ಚೆನ್ನೈ: ಕೇಂದ್ರ ಸರ್ಕಾರ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ ಮಾಡುತ್ತಿದೆ ಎಂದು ಆರೋಪಿಸಿ ಕೇರಳ ಮತ್ತು ತಮಿಳುನಾಡು ಸರ್ಕಾರಗಳು ಸಂಸತ್ ಭವನದ ಸಂಕೀರ್ಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದವು.
ಕೇಂದ್ರ ಸರ್ಕಾರ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ಕರ್ನಾಟಕ ಕಾಂಗ್ರೆಸ್ ಪ್ರತಿಭಟನೆ ನಡೆಸಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ಎಲ್‌ಡಿಎಫ್, ಸಂಸದ ಟಿಆರ್.ಬಾಲು ಮುಂದಾಳತ್ವದಲ್ಲಿ ಡಿಎಂಕೆ ಸಂಸದರು ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸಿದವು ಕೇರಳ ಸಚಿವ ಕಾಡನ್ನಪಲ್ಲಿ ರಾಮಚಂದ್ರನ್ ಮಾತನಾಡಿ, ಕೇಂದ್ರ ಸರ್ಕಾರದ ನೀತಿಗಳು ಸಂವಿಧಾನದ ವಿರುದ್ಧವಾಗಿವೆ. ನಾವು ಒಕ್ಕೂಟ ಸಂಬಂಧನವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ. ಆದರೆ, ಕೇಂದ್ರ ಸರ್ಕಾರ ಇದರ ವಿರುದ್ಧವಾಗಿದೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಯುಡಿಎಫ್ ಗೈರು: ಇತ್ತ ಕೇರಳ ಸರ್ಕಾರದ ಪ್ರತಿಭಟನೆಯಲ್ಲಿ ಭಾಗಿಯಾಗಲು ವಿಪಕ್ಷ ಯುಡಿಎಫ್ ನಿರಾಕರಿಸಿದೆ. ರಾಜ್ಯದ ಎಲ್ಲಾ ಆರ್ಥಿಕ ಸಮಸ್ಯೆಗಳಿಗೆ ಕೇಂದ್ರವನ್ನು ದೂಷಿಸುತ್ತಿರುವ ಸಿಎಂ ಪಿಣರಾಯಿ ವಿಜಯನ್ ನೇತೃತ್ವದ ಎಲ್‌ಡಿಎಫ್ ನೀತಿಯನ್ನು ಒಪ್ಪಲಾಗದು. ಇಂದಿನ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿಲ್ಲ ಎಂದು ಘೋಷಿಸಿದೆ.