ಮಂಡ್ಯ: ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥವು ಫೆ.೨೨ ರವರೆಗೆ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಗ್ರಾಮಪಂಚಾಯಿತಿ ವ್ಯಾಪ್ತಿಗಳಲ್ಲಿ ಸಂಚಾರಿಸಿ ಫೆ. ೨೩ ರಂದು ಬೆಂಗಳೂರಿನಲ್ಲಿ ನಡೆಯುವ ಸಮ್ಮೇಳನಕ್ಕೆ ಸೇರ್ಪಡೆಯಾಗವುದು, ಜಿಲ್ಲೆಯ ಜನರು ಜಾಥವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಮನವಿ ಮಾಡಿದರು.
ಪ್ರಸ್ತುತ ಜಿಲ್ಲೆಯ ಮಂಡ್ಯ, ನಾಗಮಂಗಲ ಮತ್ತು ಕೆ.ಆರ್.ಪೇಟೆ ತಾಲ್ಲೂಕುಗಳಲ್ಲಿ ಸಂವಿಧಾನ ಜಾಗೃತಿ ಜಾಥಾವನ್ನು ಯಶ್ವಸಿಯಾಗಿ ಮಾಡಲಾಗಿದ್ದು, ಜಾಥವನ್ನು ತಾಲ್ಲೂಕು ಮಟ್ಟದ ಅಧಿಕಾರಿಗಳು, ಮುಖಂಡರುಗಳು ಹಾಗೂ ಶಾಲಾ ವಿದ್ಯಾರ್ಥಿಗಳು, ಊರಿನ ಯುವಕರು, ಮಹಿಳೆಯರು ಎಲ್ಲರು ಸೇರಿ ಸಂವಿಧಾನ ಜಾಥವನ್ನು ಬರಮಾಡಿಕೊಳ್ಳುತ್ತಿದ್ದಾರೆ ಎಂದರು.
ಜಾಥದಲ್ಲಿ ಪೀಠಿಕೆ ವಾಚನ, ಬೈಕ್ ರ್ಯಾಲಿ, ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಮತ್ತು ಪ್ರದರ್ಶನ ನಡಿಗೆ ಕಾರ್ಯಕ್ರಮ, ಮಹಿಳೆಯರಿಗೆ ರಂಗೋಲಿ ಸ್ಪರ್ಧೆ, ಯುವಕರು ಎತ್ತಿನ ಗಾಡಿ ಜಾಥಾ, ಕ್ರಾಂತಿ ಗೀತೆಗಳ ವಾಚನ, ದೇಶಭಕ್ತಿ ಗೀತೆ ಹಾಗೂ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮುಖಾಂತರ ಸಂವಿಧಾನ ಜಾಥಾ ಕಾರ್ಯಕ್ರಮವನ್ನು ಯಶ್ವಸಿಗೊಳಿಸಿರುತ್ತಾರೆ. ಪ್ರಸ್ತುತ ಪಾಂಡವಪುರ ತಾಲ್ಲೂಕಿನಲ್ಲಿ ಗ್ರಾಮಪಂಚಾಯಿತಿ ಮಟ್ಟದಲ್ಲಿ ಸಂವಿಧಾನ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತೇವೆ ಎಂದು ತಿಳಿಸಿದರು.