ಮಂಡ್ಯ: ಜಿಲ್ಲಾಡಳಿತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಇವರ ಸಹಯೋಗದೊಂದಿಗೆ ೨೦೨೩-೨೪ನೇ ಸಾಲಿನ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು ಗಾಂಧಿ ಭವನದಲ್ಲಿ ಫೆ.೧೫ ರಂದು ಬೆಳಿಗ್ಗೆ ೧೧ ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚೆಲುವರಾಯಸ್ವಾಮಿ ರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ವಿಧಾನಸಭಾ ಕ್ಷೇತ್ರದ ಶಾಸಕರಾದ ಪಿ. ರವಿಕುಮಾರ್ ರವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸಂಸದೆ ಸುಮಲತಾ ಅಂಬರೀಶ್, ವಿಧಾನಪರಿಷತ್ ಶಾಸಕ ಮರಿತಿಬ್ಬೇಗೌಡ, ಮಧು ಜಿ. ಮಾದೇಗೌಡ, ದಿನೇಶ್ ಗೂಳಿಗೌಡ, ವಿಧಾನಸಭೆ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ, ಎ.ಬಿ. ರಮೇಶ್ ಬಂಡಿಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಎಚ್.ಟಿ. ಮಂಜು, ಕೆ.ಎಂ. ಉದಯ್ ರವರು ಆಗಮಿಸಲಿದ್ದಾರೆ.