ಸುತ್ತೂರು: ಶ್ರೀ ಸುತ್ತೂರು ಕ್ಷೇತ್ರದಲ್ಲಿ ನಿರ್ಮಿಸಿರುವ ಶ್ರೀಮತಿ ಪಾರ್ವತಮ್ಮ ಮತ್ತು ಡಾ. ಶ್ರೀ ಶಾಮನೂರು ಶಿವಶಂಕರಪ್ಪ ಅತಿಥಿಗೃಹವನ್ನು ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾರವರು ಫೆಬ್ರವರಿ ೧೧, ಭಾನುವಾರದಂದು ಅಪರಾಹ್ನ ೧೨.೦೦ ಗಂಟೆಗೆ ಉದ್ಘಾಟಿಸಲಿದ್ದಾರೆ.
ಈ ಮೊದಲು ಕಾರ್ಯಕ್ರಮ ಫೆಬ್ರವರಿ ೧೦, ಶನಿವಾರದಂದು ನಿಶ್ಚಯವಾಗಿತ್ತು. ಆದರೆ ಅಂದು ಸಂಸತ್ ಅಧಿವೇಶನ ಮುಂದುವರಿದಿರುವ ಕಾರಣ ಒಂದು ದಿನ ಮುಂದೂಡಲಾಗಿದೆ.
ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ.ಎಲ್. ಸಂತೋಷ್, ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ವಿ. ಜೋಷಿ, ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ, ವಿಧಾನಸಭೆ ವಿರೋಧಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ. ವಿಜಯೇಂದ್ರ ಹಾಗೂ ಮಾಜಿ ಸಂಸದರಾದ ಡಾ. ಪ್ರಭಾಕರ್ ಕೋರೆಯವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ
ಭಕ್ತಾದಿಗಳು ಹಾಗೂ ಸಾರ್ವಜನಿಕರು ಈ ಬದಲಾವಣೆಯನ್ನು ಗಮನಿಸಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕೋರಿದೆ.