ಮಂಡ್ಯ: ಕೆರಗೋಡು ಹನುಮ ಧ್ವಜ ಹಿನ್ನಲೆ ಇಂದು ಮಂಡ್ಯ ನಗರ ಹಾಗೂ ಕೆರಗೋಡು ಗ್ರಾಮ ಬಂದ್ ಗೆ ಶ್ರೀರಾಮ ಭಜನಾ ಮಂಡಳಿ, ವಿಶ್ವ ಹಿಂದೂ ಪರಿಷತ್, ಭಜರಂಗ ದಳ, ಭಜರಂಗ ಸೇನೆಯಿಂದ ಕರೆ ನೀಡಲಾಗಿದೆ.
ಬಂದ್ ಗೆ ಕರವೇ, ಲಾರಿ ಮಾಲೀಕರ ಸಂಘ, ಕೆಲವು ವರ್ತಕರು ಹಾಗೂ ಹೋಟೆಲ್ ಮಾಲೀಕರು ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ.
ಮಂಡ್ಯ ನಗರ ರೈಲ್ವೆ ನಿಲ್ದಾಣದ ಆಂಜನೇಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ದೇವಸ್ಥಾನದ ಬಳಿ ಹಿಂದು ಕಾರ್ಯಕರ್ತರ ಜಮಾವಣೆಗೊಂಡಿದ್ದು, ಜೈ ಶ್ರೀ ರಾಮ್ ಘೋಷಣೆಯೊಂದಿಗೆ ಜಾಥಾದಲ್ಲಿ ಪಾಲ್ಗೊಂಡರು.
ಬಳಿಕ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ತೆರಳಲಾಯಿತು. ಈ ವೇಳೆ ಪ್ರತಿಭಟನಾ ಸ್ಥಳಕ್ಕೆ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ, ಎಸ್ಪಿ ಎನ್.ಯತೀಶ್ ಭೇಟಿ ನೀಡಿದರು.
ಅದೇ ಸ್ಥಳದಲ್ಲಿ ಹನುಮ ಧ್ವಜ ಹಾರಿಸಲು ಹಿಂದೂ ಕಾರ್ಯಕರ್ತರು ಆಗ್ರಹಿಸಿದ್ದು, ಡಿಸಿ ಮುಖೇನ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.