ಶಿವಮೊಗ್ಗ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲು ಸಾಮಾಜಿಕ ಜಾಲತಾಣದಲ್ಲಿ ಎಸೆಸೆಲ್ಸಿ ಪರಿಕ್ಷಾ ವೇಳಾಪಟ್ಟಿಯ ವಿಷಯವಾಗಿ ಜನರಲ್ಲಿ ಧಾರ್ಮಿಕ ಭಾವನೆಯನ್ನು ಕೆರಳಿಸುವ ರೀತಿಯಲ್ಲಿ ಪೋಸ್ಟ್ ಮಾಡಿದ ಚಕ್ರವರ್ತಿ ಸೂಲಿಬೆಲೆ ವಿರುದ್ದ ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಸೆಸೆಲ್ಸಿ ಪೂರ್ವ ಸಿದ್ದತಾ ಪರೀಕ್ಷಾ ವೇಳಾಪಟ್ಟಿ ಕುರಿತು ಚಕ್ರವರ್ತಿ ಸೂಲಿಬೆಲೆ ಸಾರ್ವಜನಿಕವಾಗಿ ಫೇಸ್ ಬುಕ್ ನಲ್ಲಿ KARNATAKA STATE 10 STANDARD EXAM TIME TABLE RELEASED. ALL THE EXAM IN THE MORNING SESSION BUT FOR FRIDAY, WHY ?, OH.. TIME FOR NAMAZ 1 ಎಂದು ಫೋಸ್ಟ್ ಹಾಕುವ ಮೂಲಕ ಧಾರ್ಮಿಕ ಭಾವನೆ ಕೆರಳಿಸುವ ಪ್ರಯತ್ನ ಮಾಡಿದ್ದಾರೆ.
ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಎಸ್.ಎನ್.ಜಯನಗರ ಠಾಣೆಗೆ ದೂರು ಸಲ್ಲಿಸಿದ್ದರು. ಈ ದೂರಿನ ಅನ್ವಯ ಸೂಲಿಬೆಲೆ ವಿರುದ್ಧ ಐಪಿಸಿ ೧೮೬೦ರ ೫೦೫/೧ಬಿ ೫೦೫/೧ಸಿ ೫೦೫/೨ ಕಲಂ ಅಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.