Monday, April 21, 2025
Google search engine

Homeರಾಜಕೀಯಐದು ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಕ್ಕೆ ಅಗತ್ಯ ಕ್ರಮ: ಪ್ರಿಯಾಂಕ್ ಖರ್ಗೆ

ಐದು ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಕ್ಕೆ ಅಗತ್ಯ ಕ್ರಮ: ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿಗಳನ್ನು ಜಾರಿಗೆ ತರುವ ಮೂಲಕ ಕೊಟ್ಟ ಮಾತು ಉಳಿಸಿಕೊಂಡಿದೆ. ಐದು ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಕ್ಕೆ ಅಗತ್ಯ ಕ್ರಮವಹಿಸಲಾಗುತ್ತಿದೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಚಿತ್ತಾಪುರ ತಾಲೂಕಿನ ಸಾವಂತಖೇಡ ಗ್ರಾಮದಿಂದ ಜೀವನ ಮಾರಡಗಿವರೆಗೆ ರಸ್ತೆ ಸುಧಾರಣೆ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡುತ್ತಿದ್ದರು. ರಾಜ್ಯದ ಸರ್ವಾಂಗೀಣ ಅಭಿವೃದ್ದಿಗೆ ಸರ್ಕಾರ ಬದ್ಧವಾಗಿದ್ದು ರಸ್ತೆ, ಕುಡಿಯುವ ನೀರು, ರಸ್ತೆ ನಿರ್ಮಾಣದಂತ ಮೂಲಭೂತ ಸೌಲಭ್ಯ ಒದಗಿಸುವದಕ್ಕೆ ಮೊದಲ ಆದ್ಯತೆ ನೀಡಲಾಗುವುದು. ಜೊತೆಗೆ ಐದು ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಕ್ಕೆ ಅಗತ್ಯ ಕ್ರಮವಹಿಸಲಾಗುತ್ತಿದೆ. ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳು ಫಲಾನುಭವಿಗಳಿಗೆ ತಲುಪಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ. ಈ ಬಗ್ಗೆ ಬಿಜೆಪಿಯವರು ಏನೇ ಹೇಳಿದರೂ ಯಾರೂ ಗಂಭೀರವಾಗಿ ಪರಿಗಣಿಸಬಾರದು ಎಂದು ಮನವಿ ಮಾಡಿದರು.


ನಿನ್ನೆ ನಡೆದ ಸಾರ್ವಜನಿಕರ ಆವಾಹಲು ( ಜನಸ್ಪಂದನ ) ಕಾರ್ಯಕ್ರಮದಲ್ಲಿ ಸುಮಾರು ೨೦,೦೦೦ ಜನರು ಭಾಗವಹಿಸಿ ತಮ್ಮ ಕುಂದುಕೊರತೆಗಳನ್ನು ಸಿಎಂ ಅವರ ಗಮನಕ್ಕೆ ತಂದು, ಪರಿಹಾರ ಕಂಡುಕೊಂಡರು. ಇದು ಜನಪರ ಸರ್ಕಾರವೊಂದರ ಬದ್ದತೆಯ ಪ್ರತೀಕವಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

RELATED ARTICLES
- Advertisment -
Google search engine

Most Popular