ವರದಿ : ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ಪಟ್ಟಣದ ಆಂಜನೇಯ ಬಡಾವಣೆಯಲ್ಲಿರುವ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಉದ್ಘಾಟನೆ ಕಾರ್ಯಕ್ರಮವನ್ನು ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿಯಾದ ವೆಂಕಟೇಶ್ ಉದ್ಘಾಟಿಸಿದರು.
ಪಟ್ಟಣದ ಆಂಜನೇಯ ಬಡಾವಣೆಯಲ್ಲಿರುವ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಉದ್ಘಾಟನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರದ ವತಿಯಿಂದ ನಮ್ಮ ಶಾಲೆ ನಮ್ಮ ಜವಾಬ್ದಾರಿ ಅಡಿಯಲ್ಲಿ ಕೆ.ಆರ್.ನಗರ ತಾಲ್ಲೋಕಿನಲ್ಲಿ ಮೊಟ್ಟ ಮೊದಲ ಬಾರಿಗೆ ಸುಮಾರು ೬೫ ವರ್ಷಗಳ ಹಿಂದೆ ಪ್ರಾರಂಭವಾದ ಪಟ್ಟಣದ ಆಂಜನೇಯ ಬಡಾವಣೆಯಲ್ಲಿರುವ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ರಚನೆಗೆ ಚಾಲನೆ ನೀಡುವ ಸಂಬoದ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ.
ನಂತರ ಮಾತನಾಡಿದ ಅವರು ಸರ್ಕಾರಿ ಶಾಲೆ ಅಂದರೆ ಅದು ಸರ್ಕಾರದಲ್ಲ ಅದು ಸಮುದಾಯದ್ದು ತಾವು ಓದಿದ ಶಾಲೆಯ ಹಿರಿಯ ವಿದ್ಯಾರ್ಥಿಗಳದ್ದು ಈ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳು ಇದು ದೊಡ್ಡ ದೊಡ್ಡ ವ್ಯಕ್ತಿಗಳಾಗಿ ವಿವಿಧ ಕ್ಷೇತ್ರಗಳಲ್ಲಿ ಹೆಸರನ್ನು ಮಾಡಿ ಉನ್ನತ ಹುದ್ದೆಯಲ್ಲಿದ್ದಾರೆ. ಆದ್ದರಿಂದ ಹಿರಿಯ ವಿದ್ಯಾರ್ಥಿಗಳು ತಾವು ಓದಿದ ಶಾಲೆಗೆ ತಮ್ಮದೇ ಆದ ಜವಾಬ್ದಾರಿಯನ್ನು ಅರಿತು ಶಾಲೆಯ ಉನ್ನಿತಿಕರಣಕ್ಕೆ ಮತ್ತು ದಾಖಲಾತಿ ಹೆಚ್ಚಳಕ್ಕೆ ಹಿರಿಯ ವಿದ್ಯಾರ್ಥಿಗಳು ಕೈಜೋಡಿಸಬೇಕೆಂದು ಮನವಿ ಮಾಡಿದರು.
ಶಾಲೆಯ ಹಿರಿಯ ವಿದ್ಯಾರ್ಥಿಯಾದ ಹಾಗೂ ನರಸಿಂಹರಾಜು ರವರು ಮಾತನಾಡಿ ನಾನು ಇದೇ ಶಾಲೆಯಲ್ಲಿ ಓದಿದ್ದು ಈಗ ಖಾಸಗಿ ಶಾಲೆಗಳ ಅವಳಿಯಿಂದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗಿದ್ದು ಈ ಶಾಲೆಯಲ್ಲಿ ಓದಿದ ಎಷ್ಟೋ ವಿದ್ಯಾರ್ಥಿಗಳು ಇಂದು ಉನ್ನತ ಸ್ಥಾನವನ್ನು ಅಲಂಕರಿಸಿದ್ದಾರೆ .ಅವರೆಲ್ಲರನ್ನು ಒಟ್ಟಿಗೆ ಸೇರಿಸಿ ನಾವು ಓದಿದ ಶಾಲೆಯನ್ನು ಅಭಿವೃದ್ದಿ ಪಡಿಸಲು ಈ ಶಾಲೆಗೆ ಬೇಕಾದ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಬೇಕಾದ ದಾನಿಗಳನ್ನು ನಮ್ಮ ಹಳೆಯ ವಿದ್ಯಾರ್ಥಿಗಳಿಂದ ಒದಗಿಸುವ ಪ್ರಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಹಳೆ ವಿದ್ಯಾರ್ಥಿ ಸಂಘಕ್ಕೆ ಗೌರವಾಧ್ಯಕ್ಷರಾಗಿ ನರಸಿಂಹರಾಜು, ಅಧ್ಯಕ್ಷರಾಗಿ ಯೋಗಾನಂದ, ಉಪಾಧ್ಯಕ್ಷರಾಗಿ ರವಿಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಸ್ಪಿನ್‌ಕೃಷ್ಣ, ಸಹಕಾರ್ಯದರ್ಶಿಯಾಗಿ ಪುಟ್ಟಸ್ವಾಮಿ, ಖಜಾಂಚಿಯಾಗಿ ಶಿಲ್ಪ ಶ್ರೀನಿವಾಸ್, ಸಂಚಾಲಕರಾಗಿ ಶಿವಕುಮಾರ್, ಹೇಮಾವತಿ, ಇಂದ್ರಾಣಿ, ರವಿಕುಮಾರ್ ರವರುಗಳನ್ನು ಆಯ್ಕೆಮಾಡಲಾಯಿತು.
ಈ ಸಂದರ್ಭದಲ್ಲಿ ಸಿ.ಆರ್.ಪಿ. ಈಶ್ವರ್ ಕಾರ್ಯಕ್ರಮ ಕುರಿತು ಮಾತನಾಡಿದರು ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಬೇಬಿ ಸಹ ಶಿಕ್ಷಕರಾದ ನಾಗರತ್ನ, ಕವಿತಾ, ರಂಗಪ್ಪ ಡಿ.ವಿ, ಹಳೆಯ ವಿದ್ಯಾರ್ಥಿಯಾದ ಪಂಚಲಿoಗಸ್ವಾಮಿ, ಗಣೇಶ್, ಶೇಷಾದ್ರಿ, ಚಂದ್ರಣ್ಣ, ಗೋಪಾಲ್, ಶಂಭು, ನಂಜುoಡ, ಕುಮಾರ್ ಇನ್ನಿತರರು ಹಾಜರಿದ್ದರು.