ಶ್ರೀರಂಗಪಟ್ಟಣ: ತಾಲೂಕಿನ ಪಾಲಹಳ್ಳಿ ಗ್ರಾಮದಲ್ಲಿ ಇಂದು ಭಾನುವಾರ ಬೆಳಗ್ಗೆ ಯುವಕನೋರ್ವನನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಕೊಲೆಗೈದಿದ್ದಾರೆ. ಗ್ರಾಮದ ವಕೀಲ ನಾಗೇಂದ್ರ ಎಂಬುವರ ಪುತ್ರ ಸುಪ್ರೀತ್ @ ಪಾಪು (೨೯)ಕೊಲೆಯಾದ ಯುವಕ. ಗ್ರಾಮದ ಹಾಲಿನ ಡೇರಿ ವೃತ್ತದ ಸಮೀಪ ನಿಂತಿದ್ದ ಯುವಕನ ಮೇಲೆ ಕಾರಿನಲ್ಲಿ ಆಗಮಿಸಿದ ಮೂರ್ನಾಲ್ಕು ದುಷ್ಕರ್ಮಿಗಳು ಏಕಾಏಕಿ ಮಾರಾಕಾಸ್ತ್ರಗಳಿಂದ ತಲೆಗೆ ಕೊಚ್ಚಿ ಸ್ಥಳದಿಂದ ಪರಾರಿಯಾಗಿದ್ದಾರೆ. ಇದೀಗ ಶ್ರೀರಂಗಪಟ್ಟಣ ಟೌನ್ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.